ತುಮಕೂರು(ಕ.ವಾ)ಆ.೪: ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಆಡಳಿತ ಅವಧಿಯಲ್ಲಿ ಅವರು ತೆಗೆದುಕೊಂಡ ಕ್ರಾಂತಿಕಾರಕ ನಿರ್ಧಾರಗಳಿಂದಾಗಿ ಇಂದಿಗೂ ಅವರನ್ನು ನೆನಪಿಸಿಕೊಳ್ಳುತ್ತಿದ್ದೆವೆ. ಅವರ ೧೦೮ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ ೨೦ರಂದು ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿAದು ನಡೆದ ಡಿ. ದೇವರಾಜ ಅರಸು ಅವರ ೧೦೮ನೇ ಜನ್ಮ ದಿನಾಚರಣೆಯ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರಸು ಅವರ ಜೀವನ ಮತ್ತು ಆಡಳಿತ ಸುಧಾರಣೆಗಳ ಕುರಿತು ಜಿಲ್ಲೆಯ ಎಲ್ಲಾ ಹಿಂದುಳಿದ ವರ್ಗಗಗಳ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಬೇಕು ಹಾಗೂ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮಾಡಬೇಕೆಂದು ತಿಳಿಸಿದರು.
ಹಿಂದುಳಿದ ವರ್ಗಕ್ಕಾಗಿ ದುಡಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಅರಸು ಪ್ರಶಸ್ತಿ ನೀಡಬೇಕು ಎಂದು ಹೇಳಿದರು.
ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿದ್ದುಕೊಂಡು ಎಸ್.ಎಸ್.ಎಲ್.ಸಿ., ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಬಿಇ, ಎಂ.ಬಿ.ಬಿ.ಎಸ್., ತಾಂತ್ರಿಕ ಕೋರ್ಸ್ ಪರೀಕ್ಷೆಗಳಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಬೇಕು ಎಂದು ಹೇಳಿದರು.
ಜಿಲ್ಲೆಗೆ ಅರಸು ಅವರ ಕೊಡುಗೆ ಅಪಾರವಾದದ್ದು, ಆದ್ದರಿಂದ ನಗರದ ಕೆಎಸ್ಆರ್ಟಿಸಿ ನೂತನ ಬಸ್ ನಿಲ್ದಾಣಕ್ಕೆ ಡಿ. ದೇವರಾಜ ಅರಸು ಅವರ ಹೆಸರು ನಾಮಕರಣ ಮಾಡಬೇಕೆಂದು ಸಭೆಯಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾದಿಕಾರಿಗಳು ನೀವು ಮನವಿ ನೀಡಿದರೆ, ಆ ಪ್ರಸ್ತಾವನೆಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಕಳುಹಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಉಪವಿಭಾಗಾಧಿಕಾರಿ ಗೌರವ್ಕುಮಾರ್ ಶೆಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯೆ ಜಿಲ್ಲಾ ಅಧಿಕಾರಿ ಎಸ್.ಆರ್.ಗಂಗಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಹಿಂದುಳಿದ ವರ್ಗಗಳ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಡಿ. ದೇವರಾಜ ಅರಸು ಜನ್ಮದಿನ ಆಚರಣೆ

Leave a comment
Leave a comment