ತುಮಕೂರು- ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ಜನಪರ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಮುಂದಿನ ಪೀಳಿಗೆಯ ಜನರಿಗೆ ಅವರ ವಿಚಾರಗಳನ್ನು ತಿಳಿಸಬೇಕು ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿAದು ಏರ್ಪಡಿಸಲಾಗಿದ್ದ ಡಿ. ದೇವರಾಜ ಅರಸು ರವರ ೧೦೮ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜಕಾರಣ ಮತ್ತು ಸಾರ್ವಜನಿಕ ಜೀವನ ಈ ಎರಡನ್ನು ನಿರ್ವಹಿಸುವ ಸಂದರ್ಭದಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ. ಇವುಗಳನ್ನೆಲ್ಲ ಮೆಟ್ಟಿನಿಂತು ರಾಜ್ಯದ ಶೋಷಿತ ಹಿಂದುಳಿದ ಸಮುದಾಯಗಳನ್ನು ಸಮಾಜದ ಮುಂಚೂಣಿಗೆ ತರಬೇಕೆಂಬ ಆಶಯವನ್ನು ಇಟ್ಟುಕೊಂಡು ಕೆಲಸ ಮಾಡಿದವರು ಅರಸು ಅವರು ಎಂದರು.
ಸAವಿಧಾನದ ಮೂಲ ಆಶಯ ಎಲ್ಲಾ ವರ್ಗದ ಜನರನ್ನು ಸಮಾನತೆಯಿಂದ ಕಾಣಬೇಕು ಎಂಬುವುದು. ಅದನ್ನು ಎಲ್ಲರೂ ಮೊದಲು ರೂಢಿಸಿಕೊಳ್ಳಬೇಕು ಎಂದರು.
ಡಿ.ದೇವರಾಜ ಅರಸು ರವರ ೧೦೮ನೇ ಜನ್ಮ ದಿನಾಚರಣೆ ಕಾರ್ಯಕ್ರಮ

Leave a comment
Leave a comment


