ತುಮಕೂರು.ನ.05:ಶರಣ ಚಳವಳಿಯ ನಂತರ ಅತಿ ಹೆಚ್ಚು ಜನರ ಒಡನಾಟ ಹೊಂದಿದ್ದ ಚಳವಳಿ ಎಂದರೆ ಅದು ದಲಿತ ಸಂಘರ್ಷ ಸಮಿತಿಯ ಹೋರಾಟಗಳಾಗಿವೆ.ಜನರ ನಡುವೆಯೇ ಇದ್ದ,ಅವರ ನೋವು,ನಲಿವುಗಳಿಗೆ ದ್ವನಿಯಾಗಿದ್ದ ದಸಂಸ, ಇದನ್ನು ಕನ್ನಡ ವಿವಿಯ ಆಧ್ಯಯನ ವರದಿಗಳು ದೃಢಪಡಿಸಿವೆ ಎಂದು ಹಿರಿಯ ಗಾಯಕ, ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಪಿಚ್ಚಳ್ಳಿ ಶ್ರೀನಿವಾಸ್ ತಿಳಿಸಿದ್ದಾರೆ.ನಗರದ ಪಾವನ ಆಸ್ಪತ್ರೆಯಲ್ಲಿ ಇಂದು ಬಹಜನ ನಾಯಕ ಬೆಲ್ಲದಮಡು ರಂಗಸ್ವಾಮಿ ಅವರ 75ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು,ದಲಿತ ಚಳವಳಿಯ ಆರಂಭದಲ್ಲಿ ಗುರುತಿಸಿಕೊಂಡಿದ್ದ ಎಲ್ಲಾ ನಾಯಕರು ತಾಯ್ತತನದಿಂದ ಕೆಲಸ ಮಾಡಿದ್ದರು.ಹಾಗಾಗಿಯೇ ಎಲ್ಲಾ ವರ್ಗದ ಜನರನ್ನು ತಲುಪಲು ಸಾಧ್ಯವಾಯಿತು ಎಂದರು.