ಸಾರಿಗೆ ಇಲಾಖೆ ಸಹಕಾರಕ್ಕೆ ಡಿಸಿ ಶ್ಲಾಘನೆ
ತುಮಕೂರು: ೨೩ನೇ ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ನ್ಯಾಯ ಸಮ್ಮತ ಹಾಗೂ ಪಾರದರ್ಶಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಿರುವ ಸಾರಿಗೆ ಇಲಾಖೆಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತದ ಚುನಾವಣಾ ಕಾರ್ಯಗಳಿಗೆ ಅಗತ್ಯವಿದ್ದ ಸುಮಾರು ೩೫೦ ಕೆಎಸ್ಆರ್ಟಿಸಿ ಬಸ್, ಇವಿಎಂ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಸಾಗಿಸಲು ೧೦೦ ಕಂಟೈನರ್, ಫ್ಲೆöÊಯಿಂಗ್ ಸ್ಕಾ÷್ವಡ್ ಸೇರಿದಂತೆ ವಿವಿಧ ಚುನಾವಣಾ ತಂಡಗಳ ಓಡಾಟಕ್ಕಾಗಿ ೪೦೦ ಕಾರುಗಳನ್ನು ಹಾಗೂ ೪೦ ಮಿನಿ ಬಸ್, ೧೦೦ಕ್ಕೂ ಹೆಚ್ಚು ಸರ್ಕಾರಿ ವಾಹನಗಳನ್ನು ಮೋಟಾರು ನಿರೀಕ್ಷಕ ಸದ್ರುಲ್ಲಾ ಷರೀಫ್ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್.ರಾಜು ಮಾರ್ಗದರ್ಶನದೊಂದಿಗೆ ಒದಗಿಸಿಕೊಟ್ಟಿದ್ದಾರೆ.
ಸಾರಿಗೆ ವ್ಯವಸ್ಥೆಯ ನೋಡಲ್ ಅಧಿಕಾರಿಯಾಗಿರುವ ಸಾರಿಗೆ ಇಲಾಖೆ ಅಧಿಕಾರಿಗಳು, ಚುನಾವಣಾ ಕಾರ್ಯಕ್ಕೆ ಅಗತ್ಯವಿರುವ ವಾಹನಗಳನ್ನು ಸಮರ್ಪಕವಾಗಿ ಒದಗಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾದಿ üಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್ ಅವರು ಇಲಾಖೆಯ ಕಾರ್ಯದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.