ತುಮಕೂರು:ತೆಂಗು ಮತ್ತು ಕೊಬ್ಬರಿ ದರ ಕುಸಿದಿದ್ದು, ಇದರ ಬಗ್ಗೆ ಸಂಸತ್ತಿನ ಅಧಿವೇಶನದಲ್ಲಿ ದ್ವನಿ ಎತ್ತುವಂತೆ ಒತ್ತಾಯಿಸಿ ಆಗಸ್ಟ್ ೦೫ ರಂದು ತೆಂಗು ಬೆಳೆಯುವ ಎಲ್ಲಾ ೧೫ ಜಿಲ್ಲೆಗಳ ಲೋಕಸಭಾ ಸದಸ್ಯರ ಮನೆ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು ಎಂದು ಸಂಯುಕ್ತ ಕಿಸಾನ್ ಸಂಘದ ರಾಜ್ಯ ಸಂಚಾಲಕ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.ನಗರದ ಕನ್ನಡ ಭವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ, ಕೊಬ್ಬರಿ ಬೆಳೆಗಾರರ ಹೋರಾಟ ಸಮಿತಿ,ತೆಂಗು ಬೆಳೆಗಾರರ ಸೀಮೆ ಕರ್ನಾಟಕ ಜಂಟಿಯಾಗಿ ಸಂಯುಕ್ತ ಹೋರಾಟ ಕರ್ನಾಟಕದ ತುಮಕೂರು ಜಿಲ್ಲಾ ಸಂಚಾಲಕ ಸಿ.ಯತಿರಾಜು ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ತೆಂಗು ಮತ್ತು ಕೊಬ್ಬರಿ ಧಾರಣೆ ಕುಸಿತ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳುವ ಕ್ರಮಗಳ ಕುರಿತ ಸಮಾಲೋಚನಾ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಂದು ತೆಂಗು ಮತ್ತು ಕೊಬ್ಬರಿಗೆ ವೈಜ್ಞಾನಿಕ ಉತ್ಪಾಧನಾ ವೆಚ್ಚಕ್ಕೆ ಅನುಗುಣವಾಗಿ ಬೆಂಬಲ ಬೆಲೆ ನಿಗಧಿ ಪಡಿಸುವಂತೆ ಸರಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಲಾಗುವುದು ಎಂದರು.