ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಲ್ಲಿ ರಸ್ತೆಗಳು ಮಹತ್ವದ ಪಾತ್ರವಹಿಸುತ್ತವೆ ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ಅಭ್ಯುದಯವಾಗುತ್ತದೆ ಎಂದು ಶಾಸಕ ಬಿ ಸುರೇಶ್ ಗೌಡ ತಿಳಿಸಿದರು.
ಇಂದು ಕ್ಷೇತ್ರದ ಹುಳ್ಳೇನಹಳ್ಳಿ ಮುಖ್ಯರಸ್ತೆಯಿಂದ ತೋಪೇಗೌಡನಪಾಳ್ಯಕ್ಕೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಶಾಸಕ ಬಿ.ಸುರೇಶಗೌಡ ಮಾತನಾಡಿದರು.
ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಮುಖೇನ ಕ್ಷೇತ್ರದ ಜನರ ಋಣ ತೀರಿಸುವಂತಹ ಕೆಲಸವನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆಂದು ಬಿ ಸುರೇಶ್ ಗೌಡ ತಿಳಿಸಿದರು ಬಿಜೆಪಿ ಸರಕಾರದ ಅವಧಿಯಲ್ಲಿ
ಓ ಆರ್ ಎಫ್ ಯೋಜನೆಯಡಿಯಲ್ಲಿ ಕ್ಷೇತ್ರದ ರಸ್ತೆ ಸುಧಾರಣೆ ಮತ್ತು ರಸ್ತೆ ಅಭಿವೃದ್ಧಿಗಾಗಿ ರೂ 70.00 ಲಕ್ಷ ಅನುದಾನ ಬಿಡುಗಡೆ ಮಾಡಿಸಿದ್ದು ಸದರಿ ಅನುದಾನದಲ್ಲಿ ಈ ಭಾಗದ 4
ನಾಲ್ಕರು ಗ್ರಾಮಗಳಿಗೆ ಉತ್ತಮ ರಸ್ತೆ ಸಂಪರ್ಕ ಕಲ್ಪಿಸಿಕೊಡುವುದಾಗಿ ಶಾಸಕ ಬಿ.ಸುರೇಶಗೌಡ ತಿಳಿಸಿದರು. ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ಗ್ರಾಮಗಳ ರಸ್ತೆಗಳನ್ನು ಅಭಿವೃದ್ಧಿಪಡಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದು ಈ ಯೋಜನೆ ಉದ್ದೇಶವಾಗಿದೆ ಎಂದು ಸುರೇಶ್ ಗೌಡ ತಿಳಿಸಿದರು.
ಕಾರ್ಯಕ್ರಮದಲ್ಲಿ ಹೊಳಕಲ್ಲು ಪಂಚಾಯಿತಿ ಅಧ್ಯಕ್ಷರಾದ H A ಆಂಜಿನಪ್ಪನವರು, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ನೀಲಕಂಠಪ್ಪನವರು, ಪ್ರಧಾನ ಕಾರ್ಯದರ್ಶಿಗಳಾದ ಸಿದ್ದೇಗೌಡರು, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುನಂದಾ ಹನುಮೇಗೌಡರು, ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಮೂರ್ತಿ, ಕುಮಾರ್, ಮುಖಂಡರಾದ ವಡ್ಡರಹಳ್ಳಿ ಶ್ರೀನಿವಾಸ್, ಮರೀಗೌಡರು, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಶಶಿಕಿರಣ್, ಹಮೀದ್ ಖಾನ್, ಗಿರೀಶ್, ರಮೇಶ್, ನಟರಾಜು,ಹೊಳಕಲ್ಲು ಹಾಲು ಉತ್ಪದಕರ ಸಹಕಾರ ಸಂಘದ ಅಧ್ಯಕ್ಷರಾದ ನಾಗಣ್ಣ ನವರು, ನರುಗನಹಳ್ಳಿ ಕುಮಾರ್ ಮತ್ತು ಹುಳ್ಳೇನಹಳ್ಳಿ ಹಾಗೂ ತೋಪೇಗೌಡನ ಪಾಳ್ಯದ ಎಲ್ಲಾ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.