ಮೇ ೨೫ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ ತುಮಕೂರು(ಕ.ವಾ)ಮೇ.೨೩: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು IಓಆUSIಓಆ ಃಂಓಏ ಸಂಸ್ಥೆಯ ಸಹಯೋಗದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬAಧ ಮೇ ೨೫ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಆಸಕ್ತ ೧೮ ರಿಂದ ೩೫ ವರ್ಷದೊಳಗಿನ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೧೬-೨೨೭೮೪೮೮ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.