ತುಮಕೂರು(ಕ.ವಾ.)ಸೆ.೧೬: ಜಿಲ್ಲೆಯಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ಭೋಜನ, ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ, ಮತ್ತಿತರ ಅಗತ್ಯ ಸೌಲಭ್ಯಗಳ ಕೊರತೆ ಕಂಡು ಬಂದಲ್ಲಿ ಸಂಬAಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು. ಶುಕ್ರವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ನಿಲಯ/ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆಯಾಗದAತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಎಲ್ಲಾ ವಸತಿ ನಿಲಯಗಳಿಗೂ ಕಡ್ಡಾಯವಾಗಿ ಆವರಣ ಗೋಡೆ ನಿರ್ಮಿಸಬೇಕು. ಭದ್ರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಆದ್ಯತೆ ಮೇಲೆ ಆವರಣ ಗೋಡೆ ನಿರ್ಮಿಸಬೇಕು. ವಿದ್ಯಾರ್ಥಿನಿಲಯಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಲು ಕ್ರಿಯಾ ಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.