ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ಅವರು ತಿರುಗೇಟು ನೀಡಿದರು.
ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ಮಾಡುತ್ತೇನೆ. ಒಂದೊoದು ಘಟನೆಗೂ ಒಂದೊoದು ಕಾರಣ ಇರುತ್ತದೆ. ಎಲ್ಲದರ ಬಗ್ಗೆಯೂ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಬಿಜೆಪಿಯವರ ಕಾಲದಲ್ಲಿ ಎಷ್ಟು ಕೊಲೆಗಳು ಆಗಿದ್ದವು ಎಂಬ ಬಗ್ಗೆ ಅಂಕಿ-ಅoಶ ಸಹಿತ ಹೇಳುತ್ತೇನೆ. ಆಗ ಯಾರ ಅಧಿಕಾರದ ಅವಧಿಯಲ್ಲಿ ರಾಜ್ಯ ಸುರಕ್ಷಿತವಾಗಿದೆ ಎಂಬುದು ಗೊತ್ತಾಗುತ್ತದೆ ಎಂದು ಅವರು ಹೇಳಿದರು.
ಇನ್ನು ನಾಲ್ಕು ವರ್ಷ ಬಿಜೆಪಿಯವರು ರಾಜೀನಾಮೆ ಕೇಳುತ್ತಿರಬೇಕು. ಅವರಿಗೆ ನಮ್ಮ ರಾಜೀನಾಮೆ ಕೇಳುವುದೇ ಕೆಲಸ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ
Leave a comment
Leave a comment