ಕಲ್ಬುರ್ಗಿ ಜಿಲ್ಲೆಯಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಲಬುರ್ಗಿ ಇವರ ಸಂಯುಕ್ತಾಶ್ರಯದಲ್ಲಿ 2023ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಕ್ರೀಡಾ ಮತ್ತು ಸಂಸ್ಕೃತ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಕಲ್ಬುರ್ಗಿ ಜಿಲ್ಲಾಧಿಕಾರಿಗಳಾದ ಫೌಜೀಯಾ ತರನುಂ ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ವಿಶೇಷ ನೋಂದಣಿ ಅಭಿಯಾನ ಕುರಿತು ಮಾತನಾಡಿದರು. ಇದೇ ಸಂದರ್ಭದಲ್ಲಿ ಅಂಗವಿಕಲರಿಗೆ ಎಷ್ಟೇ ಸಮಸ್ಯೆ ಇದ್ದರೂ ಅದನ್ನು ಮೀರಿ ಸಾಧನೆ ಮಾಡಿರುವುದು ನಿಜಕ್ಕೂ ನನಗೆ ಸ್ಪೂರ್ತಿ ನೀಡಿದೆ ಎಂದರು.
