ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ಅವರಿಂದ ಪ್ರಗತಿ ಪರಿಶೀಲನಾ ಸಭೆ
ತುಮಕೂರು(ಕ.ವಾ.)ಜೂ.೨೨: ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವತಿಯಿಂದ ಕೈಗೊಳ್ಳಲಾದ ವಿವಿಧ ಯೋಜನೆಗಳ ಕಾಮಗಾರಿಗಳಿಗೆ ಸಂಬAಧಿಸಿದAತೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ನಿನ್ನೆ ಸಂಜೆ ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ವಿವಿಧ ಇಲಾಖೆಗಳ ಯೋಜನೆಗಳ ಮತ್ತು ಕಾರ್ಯಕ್ರಮಗಳ ಅನುಷ್ಟಾನ ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿದರು.
“ಗೃಹ ಜ್ಯೋತಿ ಯೋಜನೆ”ಯು ಕರ್ನಾಟಕ ಸರ್ಕಾರದ ಪ್ರಮುಖ ಯೋಜನೆಯಾಗಿದ್ದು, ಇದು ಕರ್ನಾಟಕದ ಪ್ರತಿ ಗೃಹ ಬಳಕೆದಾರರಿಗೆ ೨೦೦ ಯೂನಿಟ್ಗಳನ್ನು ಒಳಗೊಂಡAತೆ ಉಚಿತ ವಿದ್ಯುತ್ ಒದಗಿಸುತ್ತದೆ. ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನಕ್ಕೆ ಸಂಬAಧಿಸಿದAತೆ ಮೊದಲಿಗೆ ಬೆಸ್ಕಾಂ ವತಿಯಿಂದ ಯೋಜನೆ ರೂಪಿಸಿ ಈ ಯೋಜನೆ ಕಾರ್ಯಗತಗೊಳಿಸಲು ಸಿದ್ಧರಾಗುವಂತೆ ಸೂಚಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಾರ್ಯ ಯೋಜನೆಯನ್ನು ರೂಪಿಸಬೇಕು ಮತ್ತು ಜಿಲ್ಲೆಯಾದ್ಯಂತ ಆರ್ಓ ಘಟಕಗಳು ಸುಸ್ಥಿತಿಯಲ್ಲಿರಬೇಕು. ನೀರಿನ ಸಮಸ್ಯೆ ಇರುವ ಕಡೆ ಮೊದಲಿಗೆ ಕೊಳವೆ ಬಾವಿ ಮೂಲಕ ನೀರು ಪೂರೈಕೆ, ಕೊಳವೆ ಬಾವಿ ಇಲ್ಲದ ಕಡೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಟ್ಯಾಂಕರ್ಗಳಿಗೆ ಜಿಪಿಎಸ್ ಅಳವಡಿಸಬೇಕು ಮತ್ತು ಇದಕ್ಕೆ ಟಾಸ್ಕ್ಪೋರ್ಸ್ ಸಮಿತಿಯ ಅನುಮತಿ ಇರಬೇಕು. ಪಾವಗಡದಂತಹ ಪ್ರದೇಶದಲ್ಲಿ ಜಲಮೂಲ ಇರುವ ಕಡೆಗಳಲ್ಲಿ ಕೊಳವೆ ಬಾವಿ ಕೊರೆದು ಪೈಪ್ಲೈನ್ ಎಳೆಯುವಂತೆ ಗ್ರಾಮೀಣ ನೀರು ನೈರ್ಮಲ್ಯ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ ರವೀಶ್ ಅವರಿಗೆ ಸೂಚಿಸಿದರು.
ಇಂದಿರಾ ಕ್ಯಾಂಟೀನ್ ವ್ಯವಸ್ಥಿತವಾಗಿ ನಡೆಯಬೇಕು. ಅವ್ಯವಸ್ಥೆಯನ್ನು ತಾವು ಸಹಿಸುವುದಿಲ್ಲ. ಇಲ್ಲಿ ಸಿಸಿ ಟಿವಿ ಅಳವಡಿಸಿ ಜನರಿಗೆ ಉತ್ತಮ ಆಹಾರ ವಿತರಿಸುವಂತೆ ನಗರ ಯೋಜನಾ ಪ್ರಾಧಿಕಾರದ ಅಧಿಕಾರಿ ಅಂಜಿನಪ್ಪ ಅವರಿಗೆ ಸೂಚಿಸಿದರು.
ಮುಜರಾಯಿ ದೇವಸ್ಥಾನಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಭಕ್ತರ ಕಾಣಿಕೆಗಳನ್ನು ಹುಂಡಿಗೆ ಹಾಕುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಮುಜರಾಯಿ ತಹಶೀಲ್ದಾರ್ ಅವರಿಗೆ ಸೂಚಿಸಿದರು.
ಜಿಲ್ಲೆಯಾದ್ಯಂತ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರಗಳನ್ನು ವಿತರಿಸಬೇಕು. ಎಲ್ಲೂ ಕೊರತೆಯಾಗದ ಹಾಗೆ ಕ್ರಮವಹಿಸುವಂತೆ ಕೃಷಿ ಜಂಟಿ ನಿರ್ದೇಶಕ ರವಿಕುಕಮಾರ್ ಅವರಿಗೆ ಸೂಚಿಸಿದರು.
ನಗರದ ಕೈಗಾರಿಕಾ ಪ್ರದೇಶಗಳಲ್ಲಿ ಎಲ್ಲೆಲ್ಲಿ ಅನಿಲ ಕಾರ್ಖಾನೆಗಳಿವೆಯೋ ಅಲ್ಲಿ ಒಂದು ಉಪ ಅಗ್ನಿಶಾಮಕ ಘಟಕಗಳನ್ನು ಸ್ಥಾಪಿಸಬೇಕು. ಮತ್ತು ಕಾಲಕಾಲಕ್ಕೆ ಅಣಕು ಪ್ರದರ್ಶನ ಏರ್ಪಡಿಸುವಂತೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ೩೭೧ ಸಣ್ಣ ಕೆರೆಗಳಿದ್ದು, ಹೆಚ್ಚಿನ ಮಳೆ ಸುರಿದಲ್ಲಿ ಕೆರೆ ಒಡೆಯದ ಹಾಗೆ ಬದುಗಳನ್ನು ಪರಿಶೀಲಿಸಬೇಕು. ಎಲ್ಲೂ ಸಹ ಕೆರೆ ಒಡೆಯದ ಹಾಗೆ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ೩ ಉಪವಿಭಾಗಗಳ ಉಪವಿಭಾಗಾಧಿಕಾರಿಗಳು, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರುಗಳು ಸೇರಿದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಶ್ರೀನಿವಾಸ್ ಕೆ. ಅವರಿಂದ ಪ್ರಗತಿ ಪರಿಶೀಲನಾ
Leave a comment
Leave a comment