ವಿವೇಚನೆಯ ಮರೆತು ನಾವು ವರ್ತಿಸುವುದು ಬೇಡ ನಮಗೆ ಸಂವಿಧಾನ ನೀಡಿರುವ ಸ್ವಾತಂತ್ರ್ಯ ಸ್ವೇಚ್ಛೆ ಆಗುವುದು ಬೇಡ ಎಂದು ತುಮಕೂರಿನ ಮಹಿಳಾ ಸಬ್ ಇನ್ಸ್ಪೆಕ್ಟರ್ ವಿಜಯಲಕ್ಷಿö್ಮÃ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರದ ಶ್ರೀ ಸಿದ್ಧಾರ್ಥ ಇನ್ಸಿ÷್ಟಟ್ಯೂಟ್ ಆಫ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ (ಎಸ್ಎಸ್ಐಬಿಎಂ) ವತಿಯಿಂದ ಹಮ್ಮಿಕೊಂಡಿದ ಪ್ರಥಮ ವರ್ಷದ ಬಿಬಿಎ ಮತ್ತು ಬಿಕಾಂ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅವರು, ಬಾಲ್ಯದ ಜೀವನ ನೆನಪಿಸಿಕೊಂಡರೆ ಇಂದು ಅದರ ನಿಜವಾದ ಮೌಲ್ಯ ತಿಳಿಯುತ್ತದೆ. ಪೋಷಕರು ಕನಸನ್ನು ನನಸು ಮಾಡಿ, ನಿಮ್ಮ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನ ಹರಿಸಿ ಎಂದರು.
ಇಂದು ಅಂಗೈಯಲ್ಲಿ ಪ್ರಪಂಚ ತೋರಿಸುವ ಮೊಬೈಲ್ಫೋನ್ ಗಳಿಂದ ಅನುಕೂಲ ಅನಾನುಕೂಲತೆ ಎರಡು ಇದೆ. ಅದರಲ್ಲಿ ಉತ್ತಮವಾದದ್ದನ್ನು ಆಯ್ಕೆ ಮಾಡಿಕೊಳ್ಳಿ, ನಿಮ್ಮ ಪೋಷಕರು ಅವರ ಕನಸುಗಳ ನಿಮ್ಮ ಮೂಲಕ ಈಡೇರಿಸಿಕೊಳ್ಳಲು ಬಯಸಿರುತ್ತಾರೆ. ಅವರಿಗೆ ಉತ್ತಮವಾದ ಉಡುಗೊರೆ ನೀಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ನೀಡುವುದರ ಜೊತೆಗೆ ಪೋಕ್ಸೋ ಕಾಯ್ದೆ, ಏನ್ಡಿಪಿಎಸ್ ಕಾಯ್ದೆಗಳ ಕುರಿತು ಮಾಹಿತಿಯನ್ನು ನೀಡಿದರು. ಯಾವುದೇ ಪರಿಸ್ಥಿತಿಯಲ್ಲೂ ಕಾನೂನಿನ ವಿರುದ್ಧ ನಡೆದು ಕೊಳ್ಳಬೇಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ಹೇಳಿದರು.
ಎಸ್ಎಸ್ಐಬಿಎಂನ ಪ್ರಾಂಶುಪಾಲರಾದ ಡಾ. ಮಮತಾ ಅವರು ಮಾತನಾಡಿ, ವಿದ್ಯಾರ್ಥಿಗಳು ಒಳ್ಳೆಯ ಮಾರ್ಗದಲ್ಲಿ ಸಾಗಿ, ನಿಮ್ಮ ಮುಂದಿನ ಭವಿಷ್ಯಕ್ಕೆ ಶುಭವಾಗಲಿ ಎಂದು ಆರೈಸಿದರು.
ಕಾರ್ಯಕ್ರಮದಲ್ಲಿ ಬಿಕಾಂ ವಿಭಾಗದ ಮುಖ್ಯಸ್ಥರಾದ ಶಾಲಿಕ, ಬಿಸಿಎ ವಿಭಾಗದ ಮುಖ್ಯಸ್ಥರಾದ ಮುತ್ತುರಾಜ್, ಬಿಬಿಎ ವಿಭಾಗದ ಮುಖ್ಯಸ್ಥರಾದ ಹರ್ಷರಾಧ್ಯಾ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಯಾವುದೇ ಪರಿಸ್ಥಿತಿಯಲ್ಲೂ ಕಾನೂನಿನ ವಿರುದ್ಧ ನಡೆದು ಕೊಳ್ಳಬೇಡಿ
Leave a comment
Leave a comment