ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತುಮಕೂರಿನ ಕೈದಾಳದಲ್ಲಿರುವ ಐತಿಹಾಸಿಕ ಪ್ರಸಿದ್ಧ ಶ್ರೀ ಚನ್ನಕೇಶವಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದರು. ಈ ಸಂದರ್ಭದಲ್ಲಿ ಅಯೋಧ್ಯೆ ಶ್ರೀ ಬಾಲರಾಮಮೂರ್ತಿ ಶಿಲ್ಪಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃರಾದ ಡಾ. ಅರುಣ್ ಯೋಗಿರಾಜ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರಭು, ಎಸ್ಪಿ ಅಶೋಕ್, ತಹಶೀಲ್ದಾರ್ ರಾಜೇಶ್ವರಿ ಅವರು ಇದ್ದರು.ಐತಿಹಾಸಿಕ ದೇವಸ್ಥಾನದ ಅಭಿವೃದ್ಧಿಯ ಕುರಿತು ಸಚಿವರಾದ ಡಾ. ಜಿ.ಪರಮೇಶ್ವರ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದರು.