ಆಗ್ನೇಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅರ್ಹ ಶಿಕ್ಷಕರು ಅಗತ್ಯ ದಾಖಲೆಗಳೊಂದಿಗೆ ನೋಂದಾಯಿಸಿಕೊಳ್ಳಿ: ಜಿಲ್ಲಾಧಿಕಾರಿ ಕೆ. ಶ್ರೀನಿವಾಸ
ತುಮಕೂರು(ಕ.ವಾ.)ಅ.೫: ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ-೨೦೨೩, ಸಂಬAಧ ಮತದಾರರ ಪಟ್ಟಿ ತಯಾರಿಕೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅರ್ಹ ಶಿಕ್ಷಕರು ಆಗ್ನೇಯ ಶಿಕ್ಷಕರ ಮತದಾರರ ಪಟ್ಟಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ನೋಂದಾಯಿಸಿಕೊಳ್ಳುವAತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶ್ರೀನಿವಾಸ ಕೆ ತಿಳಿಸಿದರು.
ಮಾನ್ಯತೆ ಪಡೆದ ರಾಷ್ಟಿçÃಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ-೨೦೨೩, ಮತದಾರರ ಪಟ್ಟಿ ತಯಾರಿಕೆ ಹಾಗೂ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-೨೦೨೪ ಹಾಗೂ ಇತರ ಚುನಾವಣಾ ವಿಷಯಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆಯಲ್ಲಿ ಮಾನ್ಯತೆ ಪಡೆದ ರಾಷ್ಟಿçÃಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಸಮಾಲೋಚನೆ ನಡೆಸಿದ ಅವರು, ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗಳ ನಿರಂತರ ಪರಿಷ್ಕರಣೆ ಕಾರ್ಯವು ಪ್ರಗತಿಯಲ್ಲಿದೆ ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು, ಈ ವೇಳೆ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಸಲಹೆ, ಅಭಿಪ್ರಾಯಗಳನ್ನು ವ್ಯಕ್ತಪಡಿಸಿದವು.
ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆರವರು ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ-೨೦೨೩ಯ ಪ್ರಕ್ರಿಯೆಯ ಬಗ್ಗೆ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿ ಚುನಾವಣಾ ಪ್ರಕ್ರಿಯೆಯ ಬಗ್ಗೆ ವಿವರಿಸಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರ ಚುನಾವಣೆ-೨೦೨೩ ಸಂಬAಧ ಸಹಾಯಕ ಮತದಾನ ನೋಂದಣಾಧಿಕಾರಿಗಳು, ನಿಯೋಜಿತ ಅಧಿಕಾರಿಗಳು, ಹೆಚ್ಚುವರಿ ನಿಯೋಜಿತ ಅಧಿüಕಾರಿಗಳ ಮಾಹಿತಿ ನೀಡಿದರು.
ಸಭೆಯಲ್ಲಿ ಚುನಾವಣಾ ತಹಸಿಲ್ದಾರ್ ಗೌರಮ್ಮ ಎನ್, ಬಿಜೆಪಿ ಪಕ್ಷದÀ ಪ್ರತಿನಿಧಿ ರವಿಕುಮಾರ್, ಕಾಂಗ್ರೇಸ್ ಪಕ್ಷದ ಪ್ರತಿನಿಧಿ, ಜೆಡಿಎಸ್, ಸೇರಿದಂತೆ ವಿವಿಧ ರಾಜಕೀಯ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಮತದಾರರ ಪಟ್ಟಿಯಲ್ಲಿ ಅರ್ಹ ಶಿಕ್ಷಕರು ಅಗತ್ಯ ದಾಖಲೆಗಳೊಂದಿಗೆ ನೋಂದಾಯಿಸಿಕೊಳ್ಳಿ
Leave a comment
Leave a comment