ಇತ್ತೀಚಿನ ದಿನಗಳಲ್ಲಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪದವೀಧರರಾದ ನಂತರ ವಿಶ್ವದಾದ್ಯಂತ ಲಭ್ಯವಿರುವ ಉದ್ಯೋಗಾವಕಾಶಗಳನ್ನು ತಮ್ಮದಾಗಿಸಿಕೊಳ್ಳಲು ಸಮರ್ಥರಾಗಬೇಕು. ಸುಮಾರು 10 ಕ್ಕೂ ಹೆಚ್ಚು ಕಂಪನಿಗಳು ಹೆಚ್ಚಿನ ಐಟಿ ಮತ್ತು ನಾನ್ ಐಟಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ, 75ಕ್ಕೂ ಹೆಚ್ಚಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡರು. ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಡಿಪ್ಲೋಮಾ, ಐಟಿಐ, ಬಿಸಿಎ, ಬಿ.ಕಾಂ, ಬಿ.ಇ. ಹಾಗೂ ಸ್ನಾತಕೋತ್ತರ ಪದವೀಧರರು ಸೇರಿ ಎಲ್ಲಾ ಶೈಕ್ಷಣಿಕ ಹಂತದ ಶಿಕ್ಷಣ ಪಡೆದ ಅಭ್ಯರ್ಥಿಗಳೂ ಸಹ ಭಾಗವಹಿಸಿ ಅದರ ಪ್ರಯೋಜನವನ್ನು ಪಡೆದುಕೊಂಡಿರುತ್ತಾರೆ. ಒಂದೇ ಸೂರಿನಡಿಯಲ್ಲಿ ವೃತ್ತಿಪರ ಕೌಶಲ್ಯಕ್ಕೆ ಅನುಗುಣವಾಗಿ ಉದ್ಯೋಗಾವಕಾಶ ಕಲ್ಪಿಸುವುದು ಉದ್ಯೋಗ ಮೇಳದ ಮುಖ್ಯ ಉದ್ದೇಶವಾಗಿದೆ. ಪ್ರಸ್ತುತ ಕೈಗಾರಿಕಾ ಅಗತ್ಯಗಳಿಗೆ ಅನುಗುಣವಾಗಿ ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಶ್ರೀದೇವಿ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್.ಪಾಟೀಲ್ರವರು ತಿಳಿಸಿದರು.
ನಗರದ ಶ್ರೀದೇವಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ವತಿಯಿಂದ ಉದ್ಯೋಗ ಮೇಳ 2024 ಎಂಬ ಕಾರ್ಯಕ್ರಮವನ್ನು ಮಾ.21 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಕಾಲೇಜಿನ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.