ಆ.೯ರಂದು ಉದ್ಯೋಗಕ್ಕಾಗಿ ನೇರ ಸಂದರ್ಶನ
ತುಮಕೂರು(ಕ.ವಾ.) ಆ.೫: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು ಚಾಮುಂಡಿ ಡೈ ಕಾಸ್ಟ್(ಪಿ) ಲಿಮಿಟೆಡ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬAಧ ಆಗಸ್ಟ್ ೯ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನೇರ ಸಂದರ್ಶನ ನಡೆಯಲಿದೆ.
ಐಟಿಐ, ಡಿಪ್ಲೋಮಾ, ಪಿಯುಸಿ, ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಆಗಸ್ಟ್ ೦೯ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಡಿ.ಸಿ.ಸಿ. ಬ್ಯಾಂಕ್ ಎದುರು, ಚರ್ಚ್ ಸರ್ಕಲ್ ಹತ್ತಿರ, ತುಮಕೂರು ಇಲ್ಲಿ ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ೦೮೧೬-೨೨೭೮೪೮೮ನ್ನು ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರುದ್ಯೋಗಿಗಳಿಗೆ ಉದ್ಯೋಗ
Leave a comment
Leave a comment