ತುಮಕೂರು, ಜು.೧೭- ರಾಜಕೀಯವಾಗಿ ಯಾವುದೆ ಪ್ರಾತಿನಿಧ್ಯ ವಿಲ್ಲದ ಮತ್ತು ಆರ್ಥಿಕವಾಗಿ, ಶೈಕ್ಷಣಿಕ ವಾಗಿ ಸಾಕಷ್ಟು ಹಿಂದುಳಿದಿರುವ ಭಾವ ಸಾರ ಕ್ಷತ್ರಿಯ ಸಮಾಜದ ವಿವಿಧ ಬೇಡಿಕೆ ಗಳ ಈಡೇರಿಕೆಗೆ ಮನವಿ ಮಾಡಲು ಮುಖ್ಯಮಂತ್ರಿ ಬಳಿ ನಮ್ಮ ಮುಖಂಡರ ನಿಯೋಗ ತೆರಳುವುದಾಗಿ ಅಖಿಲ ಭಾರತ ಭಾವಸಾರ ಕ್ಷತ್ರಿಯ ಮಹಾಸಭಾದ ರಾಜ್ಯ ಘಟಕದ ಹೈಪವರ್ ಕಮಿಟಿ ಛೇರ್ಮನ್ ರಮೇಶ್ ತಾಪ್ಸೆ ತಿಳಿಸಿದರು.
ನಗರದಲ್ಲಿ ನಿನ್ನೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಭಾರತ ದೇಶದಲ್ಲಿ ೧.೫೦ ಕೋಟಿ ಹಾಗೂ ಕರ್ನಾಟಕದಲ್ಲಿ ಸುಮಾರು ೨೫ ಲಕ್ಷ ಜನಸಂಖ್ಯೆ ಹೊಂದಿ ರುವ ನಮಗೆ ರಾಜಕೀಯವಾಗಿ ಯಾವುದೆ ಪ್ರಾತಿನಿತ್ಯ ದೊರೆತಿಲ್ಲ. ನಮ್ಮ ಜನಾಂಗದ ಸಂಸದರು, ಶಾಸಕರು, ಎಂಎಲ್ಸಿಗಳು ಇಲ್ಲ. ಎಲ್ಲ ರಾಜಕೀಯ ಪಕ್ಷಗಳು ಮತ್ತು ಸರ್ಕಾರಗಳು ನಮ್ಮ ಜನಾಂಗವನ್ನು ಕಡೆಗಣಿಸಿದ್ದು, ಕೇವಲ ಓಟು ಹಾಕಲು ಬಳಸಿಕೊಳ್ಳುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ನಮ್ಮ ಸಮಾಜದ ಹಿಂದಿನ ಅಧ್ಯಕ್ಷರು ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದಿಲ್ಲ ಹಾಗೂ ಜನಾಂಗವನ್ನು ಸಂಘಟಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ೫ ವರ್ಷಗಳಿಗೊಮ್ಮೆ ನಮ್ಮ ಸಂಘಕ್ಕೆ ಚುನಾವಣೆ ನಡೆಯುತ್ತಿದ್ದು, ಈ ಸಲ ಆಯ್ಕೆಯಾಗಿರುವ ನೂತನ ಪದಾಧಿಕಾರಿಗಳು ರಾಜ್ಯದಾದ್ಯಂತ ಪ್ರವಾಸ ಮಾಡಿ, ನಮ್ಮ ಜನಾಂಗವನ್ನು ಸಂಘಟಿಸಲು ಮುಂದಾಗಿರುವುದಾಗಿ ತಿಳಿಸಿದರು.
ಜನಾಂಗದ ಯಾವುದೆ ವ್ಯಕ್ತಿ ಐಎಎಸ್, ಐಪಿಎಸ್ ಸೇರಿದಂತೆ ಇತರೆ ಯಾವುದೆ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿಲ್ಲ. ಕೆಲವೆ ಮಂದಿ ನಮ್ಮಲ್ಲಿ ಶ್ರೀಮಂತರಿದ್ದು, ಉಳಿದವರು ಬಡತನ ದಲ್ಲಿ ಟೈಲರ್ ವೃತ್ತಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಶೈಕ್ಷಣಿಕವಾಗಿ, ಆರ್ಥಿಕವಾಗಿ ತೀರ ಹಿಂದುಳಿದಿದ್ದೇವೆ ಎಂದರು.
ಆಗಸ್ಟ್ ೬ ರಂದು ಬೆಂಗಳೂರಿನ ಡಾ. ಅಂಬೇಡ್ಕರ್ ಭವನದಲ್ಲಿ ನಮ್ಮ ಸಮುದಾಯದ ಅಖಿಲ ಭಾರತ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಸುಮಾರು ೫ ಸಾವಿರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕರ್ನಾಟಕದಿಂದ ೮೦೦ ಪ್ರತಿನಿಧಿಗಳು ಭಾಗಿಯಾಗುತ್ತಿದ್ದು, ಈ ಕಾರ್ಯಕ್ರಮದ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸುತ್ತಿರುವುದಾಗಿ ತಿಳಿಸಿದರು.
ಭಾವಸಾರ ಕ್ಷತ್ರಿಯ ಅಭಿವೃದ್ಧಿ ನಿಗಮ ಸ್ಥಾಪನೆ ಅಗತ್ಯ ಅನುದಾನ ನೀಡಿಕೆ, ಬೆಂಗಳೂರು – ತುಮಕೂರು ಮಧ್ಯೆ ೨೫ ಎಕರೆ ಜಾಗವನ್ನು ಸರ್ಕಾರ ನೀಡಿ ಅಲ್ಲಿ ಸಂಘದ ಕಟ್ಟಡ ನಿರ್ಮಾಣ, ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ವಿದ್ಯಾರ್ಥಿ ನಿಲಯ ನಿರ್ಮಾಣ ಹೀಗೆ ಅಗತ್ಯ ಸೌಲಭ್ಯಗಳನ್ನು ಮಾಡಿಕೊಡುವಂತೆ ಮುಖ್ಯಮಂತ್ರಿ ಬಳಿ ನಿಯೋಗ ತೆರಳಿ ಮನವಿ ಮಾಡುವುದಾಗಿ ತಿಳಿಸಿದರು.
ರಾಜ್ಯ ಘಟಕದ ಅಧ್ಯಕ್ಷ ಶ್ರೀನಿವಾಸ ರಾವ್ ಪಿಸ್ಸೆ, ಉಪಾಧ್ಯಕ್ಷರಾದ ಗುರು ಪ್ರಸಾದ್ ಪಿಸ್ಸೆ, ಸತ್ಯನಾರಾಯಣ ಅಂರ್ಕರ್, ಜಿಲ್ಲಾ ಘಟಕದ ಅಧ್ಯಕ್ಷ ಪವನ್ಕುಮಾರ್ ಪಿಸ್ಸೆ, ಯುವ ಘಟಕದ ಉಪಾಧ್ಯಕ್ಷ ನಾಗೇಶ್ ತೇಲ್ಕರ್, ಮುಖಂಡರಾದ ಪ್ರಭಾಕರ ಬಂಡಾಳೆ, ಕಿರಣರ್ಕಾಕಡೆ, ದಿನೇಶ್ ಬಾಬು, ಮಹದೇವ್ ರಾವ್ ವರ್ಣೆ ಮುಂತಾದವರು ಹಾಜರಿದ್ದರು.
ಭಾವಸಾರ ಕ್ಷತ್ರಿಯ ಅಭಿವೃದ್ಧಿ ನಿಗಮ ಸ್ಥಾಪನೆ ಅಗತ್ಯ ಅನುದಾನ ನೀಡಿಕೆ
Leave a comment
Leave a comment