ಬರ ನಿರ್ವಹಣೆ: ಸಹಾಯವಾಣಿ ಸ್ಥಾಪನೆ
ತುಮಕೂರು(ಕ.ವಾ) ಜ.29: ರಾಜ್ಯ ಸರ್ಕಾರವು ತುಮಕೂರು ತಾಲ್ಲೂಕನ್ನು ಬರಪೀಡಿತ ತಾಲ್ಲೂಕೆಂದು ಆದೇಶ ಹೊರಡಿಸಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ತಾಲ್ಲೂಕಿನಲ್ಲಿ ಕುಡಿಯುವ ನೀರು, ದನ ಕರುಗಳಿಗೆ ಮೇವಿನ ಸಮಸ್ಯೆ ಕುರಿತಂತೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ನೋಡಿಕೊಳ್ಳುವ ಉದ್ದೇಶದಿಂದ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ ಎಂದು ತುಮಕೂರು ತಾಲ್ಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ಕುಡಿಯುವ ನೀರು, ದನ-ಕರುಗಳಿಗೆ ಮೇವಿನ ಸಮಸ್ಯೆ ಕುರಿತಂತೆ ಸಹಾಯವಾಣಿ ಸಂಖ್ಯೆ: 0816-2278496ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯ ಬರ ನಿರ್ವಹಣೆ ಸಹಾಯವಾಣಿ ಸ್ಥಾಪನೆ
Leave a comment
Leave a comment