ನಗರದ ಶಿರಾರಸ್ತೆಯ ಶ್ರೀದೇವಿ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಉದ್ಯೋಗಾವಕಾಶಕ್ಕೆ ಆಯ್ಕೆಯಾದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮೇ.೨೩ ರಂದು ಬೆಳಿಗ್ಗೆ ೧೧ ಗಂಟೆಗೆ ಮೆಕಾನಿಕಲ್ ಸೆಮಿನಾರ್ ಹಾಲ್ನಲ್ಲಿ ಇತ್ತೀಚೆಗೆ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಚಿತ್ರದಲ್ಲಿ ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್. ಪಾಟೀಲ್, ಶ್ರೀದೇವಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎಸ್.ಲೋಕೇಶ್, ಶ್ರೀದೇವಿ ಎಂ.ಬಿ.ಎ ವಿಭಾಗದ ಉಪನ್ಯಾಸಕರಾದ ಪ್ರೊ.ಟಿ.ಎಂ.ಪ್ರವೀಣ್ಕುಮಾರ್, ಶ್ರೀದೇವಿ ಪಾಲಿಟೆಕ್ನಿಕ್ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಪ್ರೊ.ಬಿ.ಸಿ.ಪ್ರದೀಪ್ಕುಮಾರ್ ಮುಂತಾದವರು ಉಪಸ್ಥಿತರಿದ್ದರು.