ಸಂತಾಪ ಸಭೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ತಿಪಟೂರು ತಾಲ್ಲೂಕು ಸಂಘದ ಮಾಜಿ ಅಧ್ಯಕ್ಷರು ಹಾಗೂ ಪ್ರಜಾವಾಣಿ ದಿನಪತ್ರಿಕೆಯ ತಾಲೂಕು ವರದಿಗಾರರು ಆದ
ಗಂಗಾಧರಪ್ಪ (85)ಅವರು ನಿಧನ ಹೊಂದಿರುತ್ತಾರೆ ಇವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲೆಯ ಅಧ್ಯಕ್ಷರಾದ ಚಿ.ನಿ. ಪುರುಷೋತ್ತಮ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ. ಇ. ರಘುರಾಮ್ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಇಂದು ನಗರದ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಸಂತಾಪ ಸಭೆಯಲ್ಲಿ ಸಂಘದ ಜಿಲ್ಲಾಧ್ಯಕ್ಷರಾದ ಚಿ.ನಿ. ಪುರುಷೋತ್ತಮ್ ಅವರು ಮಾತನಾಡುತ್ತಾ ಗಂಗಾಧರಪ್ಪ ನವರು ಜಿಲ್ಲೆಯ ಹಿರಿಯ ಪತ್ರಕರ್ತರು ತಿಪಟೂರು ತಾಲೂಕಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವನ್ನು ಕಟ್ಟಿ ಬೆಳೆಸಿದ್ದರು. ಜಿಲ್ಲೆಯಲ್ಲಿ ನಡೆಯುವ ಸಂಘದ ಚಟುವಟಿಕೆ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರೂ
ಇವರು ಪ್ರಜಾವಾಣಿ ಹಾಗೂ ಹೊಸದಿಗಂತ ಪತ್ರಿಕೆಯಲ್ಲಿ ಸುಮಾರು 15 ವರ್ಷಕ್ಕೂ ಹೆಚ್ಚು ಕಾಲ ತಾಲ್ಲೂಕು ವರದಿಗಾರರಾಗಿ ಸೇವೆಯನ್ನು ಸಲ್ಲಿಸಿದರು. ಅವರು ಸರ್ಕಾರಿ ಬಾಲಕರ ಪ್ರೌಢಶಾಲಾ ವಿಭಾಗದಲ್ಲಿ ಶಿಕ್ಷಕರಾಗಿ ತಮ್ಮ ಸೇವೆಯನ್ನು ಸಲ್ಲಿಸಿದ್ದರು ಅವರ ಅಗಲಿಕೆಯಿಂದ ಜಿಲ್ಲೆಯ ಪತ್ರಿಕಾ ಕ್ಷೇತ್ರದವರಿಗೆ ನೋವುಂಟಾಗಿದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬದವರಿಗೆ ದುಃಖ ಬರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಭೆಯಲ್ಲಿ ತಿಳಿಸಿದರು. ಗಂಗಾಧರಪ್ಪ ನವರ ನಿಧಾನಕ್ಕೆ ಸಂಘದ ಪದಾಧಿಕಾರಿಗಳು ಹಾಗೂ ಪತ್ರಕರ್ತರು ಒಂದು ನಿಮಿಷ ಶ್ರದ್ಧಾಂಜಲಿ ಸಲ್ಲಿಸಲಾಯಿತು ಈ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಟಿ. ಇ. ರಘುರಾಮ್, ಜಿಲ್ಲಾ ನಿರ್ದೇಶಕರುಗಳಾದ ಹರೀಶ್ ಆಚಾರ್ಯ, ಎಚ್ಎಸ್ ಪರಮೇಶ್, ಪಿ.ಮಲ್ಲಿಕಾರ್ಜುನ ಸ್ವಾಮಿ, ನಾಗರಾಜು ಎನ್, ಹಾಗೂ ಪತ್ರಕರ್ತರು ಭಾಗವಹಿಸಿದ್ದರು.