ನವದೆಹಲಿ ಡಿ.26 ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನ್ಮೋಹನ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನ್ಮೋಹನ್ ಸಿಂಗ್ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು. ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್ಗೆ ದಾಖಲು ಮಾಡಲಾಗಿತ್ತು.