ತುಮಕೂರು:ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ, ರಾಜ್ಯ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ತಿಗಳ ಸಮುದಾಯ ಮುಖಂಡ ಬಿ.ಹೆಚ್.ಕೃಷ್ಣಪ್ಪ ಇಂದು ತಮ್ಮ ಅಪಾರ ಬೆಂಬಲಿಗರೊAದಿಗೆ ಜೆಡಿಎಸ್ ಪಕ್ಷವನ್ನು ತೊರೆದು, ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಬಿ.ಸುರೇಶಗೌಡರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಬಿಜೆಪಿ ಗ್ರಾಮಾಂತರ ಕ್ಷೇತ್ರದ ಕಚೇರಿ ಶಕ್ತಿ ಸೌಧದಲ್ಲಿಂದು ತಮ್ಮಕುಟುಂಬದ ಸದಸ್ಯರು, ಸಂಬAಧಿಕರು ಹಾಗೂ ಅಪಾರ ಬೆಂಬಲಿಗರೊAದಿಗೆ ಬಿಜೆಪಿ ಕಚೇರಿಯಲ್ಲಿ ಆ ಪಕ್ಷದ ಬಾವುಟ ಮತ್ತು ಶಾಲು ಸ್ವೀಕರಿಸುವ ಮೂಲಕ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ಸುರೇಶ್ಗೌಡ, ೩೦ ವರ್ಷದಿಂದ ಜೆಡಿಎಸ್ ಪಕ್ಷದಲ್ಲಿದ್ದು,ಹಲವಾರು ಹುದ್ದೆಗಳನ್ನು ಅನುಭವಿಸಿ, ಪಕ್ಷಕ್ಕಾಗಿ ದುಡಿದು, ಇಂದು ಪಕ್ಷದ ಮುಖಂಡರ ನಡವಳಿಕೆಗೆ ಬೇಸತ್ತು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದು ಗ್ರಾಮಾಂತರದಲ್ಲಿ ನಮ್ಮ ಬಲವನ್ನು ಹೆಚ್ಚು ಮಾಡಿದೆ.ಜೆಡಿಎಸ್ ಬುನಾದಿ ಈ ಭಾಗದಲ್ಲಿ ಕಳಚಿದೆ ಎಂದು ಹೇಳಬಹುದಾಗಿದೆ.ನರೇಂದ್ರ ಮೋದಿ ಅವರ ನಾಯಕತ್ವ ಈ ದೇಶಕ್ಕೆ ಅತ್ಯಮೂಲ್ಯವಾಗಿರುವುದರ ಪ್ರಯುಕ್ತ ಕಳೆದ ಐದು ವರ್ಷಗಳು ಯಾವುದೇ ರೀತಿಯಾದ ಅಭಿವೃದ್ಧಿ ಆಗಿಲ್ಲ.ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಬೆಂಬಲಿಸುವು ದರೊಂದಿಗೆ ಅಭಿವೃದ್ಧಿಯ ಪಥದಲ್ಲಿ ಸಾಗಿಸುವ ಭರವಸೆಯನ್ನು ಈ ಮೂಲಕ ನೀಡುತ್ತೇನೆ ಎಂದು ಮಾಜಿ ಶಾಸಕ ಸುರೇಶ್ ಗೌಡ್ರು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ತಿಗಳ ಸಮುದಾಯ ಮುಖಂಡ ಬಿ.ಹೆಚ್.ಕೃಷ್ಣಪ್ಪ ಬಿಜೆಪಿಗೆ ಸೇರ್ಪಡೆ
Leave a comment
Leave a comment