ತುಮಕೂರು:ಗ್ರಾಮಾಂತರ ತಾಲ್ಲೂಕಿನ ವಿದ್ಯಾನಗರ ವಲಯದ ಭಾಗ್ಯನಗರದ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ನ ಸಮೃದ್ಧಿ ಜ್ಞಾನ ವಿಕಾಸ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮವನ್ನು ನಗರದ ವಾಸನ್ ಐ ಕೇರ್ ಮತ್ತು ಕಸ್ತೂರ್ ಬಾ ಆಸ್ಪತ್ರೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿತ್ತು ಕೇಂದ್ರದ ಸದಸ್ಯರ ಹಾಗು ಸ್ವಸಹಾಯ ಸಂಘಗಳ ಸದಸ್ಯರಿಗೆ ಉಚಿತ ಕಣ್ಣಿನ ತಪಾಸಣೆ ಹಾಗು ಬಿಪಿ, ಶುಗರ್ ತಪಾಸಣೆ ಯನ್ನು ನಡೆಸಲಾಯಿತು ಈ ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ಜಯಮ್ಮ, ವಲಯದ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮ ಹಾಗು ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಶ್ರೀಮತಿ ಧನಲಕ್ಷ್ಮಿ, ವಾಸನ್ ಐ ಕೇರ್ ಸಂಸ್ಥೆಯ ಮುಖ್ಯಸ್ಥರಾದ ನಾಗರಾಜು, ಕಸ್ತೂರಬಾ ಆಸ್ಪತ್ರೆಯ ಮುಖ್ಯಸ್ಥರಾದ ಭುವನ, ಕೇಂದ್ರದ ಸದಸ್ಯರ ಸ್ವಸಹಾಯ ಸಂಘಗಳ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದು ಉಚಿತ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡು ವೈದ್ಯರ ಸಲಹೆಯನ್ನು ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.