ಮುಂದಾಗಬೇಕು.ನೋವಿಲ್ಲದೆ ಕ್ಯಾನ್ಸರ್ಗೆ ಚಿಕಿತ್ಸೆ ನೀಡುವ ವಿಧಾನ ಸಂಶೋಧಿಸಿದ ಡಾ.ಸಿ.ಪಳಿನಿವೇಲು ಅಂತಹವರು ನಿಮಗೆ ಮಾದರಿಯಾಗಬೇಕು ಎಂದು ಅವರು ಸಲಹೆ ನೀಡಿದರು.
ತಮಿಳುನಾಡಿನ ಕೊಯಂಬತ್ತೂರು ಜೆಮ್ ಆಸ್ಪತ್ರೆಯ ಛೇರ್ಮನ್ ಡಾ.ಸಿ.ಪಳನಿವೇಲು ಮಾತನಾಡಿ,ಬಡತನದಂತಹ ಪರಿಸ್ಥಿತಿಯಲ್ಲಿಯೂ ಆತ್ಮವಿಶ್ವಾಸ ಕಳೆದುಕೊಳ್ಳದೆ ಬದ್ಧತೆಯಿಂದ ಶ್ರಮಪಟ್ಟಲ್ಲಿ ಗುರಿಮುಟ್ಟಬಹುದು ಎಂಬುದಕ್ಕೆ ನಾನೇ ಜೀವಂತ ಉದಾಹರಣೆ.ಬಡತನದ ಕಾರಣಕ್ಕೆ ಶಾಲೆ ಬಿಟ್ಟು,ನಂತರ ಓದು ಮುಂದುವರೆಸಿ ೨೦ನೇ ವರ್ಷಕ್ಕೆ ಎಸ್.ಎಸ್. ಎಲ್.ಸಿ ಮುಗಿಸಿ,ನಿರ್ಧಿಷ್ಟ ಗುರಿಯೊಂದಿಗೆ ಮುನ್ನೆಡೆದಿದ್ದರಿಂದ ಒಳ್ಳೆಯ ವೈದ್ಯ ಎಂದು ಜನರು ಗುರುತಿಸುವಂತಾಗಿದೆ. ವೈದ್ಯಕೀಯ ವೃತ್ತಿ ಸಮಾಜದ ಬಡವರಿಗೆ ಉತ್ತಮ ಸೇವೆ ಸಲ್ಲಿಸುವ ಅವಕಾಶ ನೀಡುವ ಪವಿತ್ರವಾದ ವೃತ್ತಿಯಾಗಿದೆ. ಇದನ್ನು ವೈದ್ಯಕೀಯ ವಿದ್ಯಾರ್ಥಿಗಳು ಈಗಿನಿಂದಲೇ ಅರ್ಥೈಸಿಕೊಂಡು ಸಮಾಜದ ಆಸ್ತಿಗಳಾಗಬೇಕು.ಕರ್ನಾಟಕ ಸರಕಾರ ಅತ್ಯುತ್ತಮ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಶಿಕ್ಷಣ ಹಾಗೂ ಆರೋಗ್ಯವೇ ಮನುಷ್ಯನ ಸಂತೋಷದ ಮೂಲಾಧಾರವಾಗಿದೆ.ಇದು ನಮ್ಮ ದೇಶದ ಮಣ್ಣಿನಲ್ಲೇ ಅಡಗಿದೆ ಎಂದ ಅವರು,ಮಾನವೀಯತೆಗಾಗಿ ಸೇವೆ ಸಲ್ಲಿಸಲು ವೈದ್ಯಕೀಯ ಶಿಕ್ಷಣ ಪಡೆಯಬೇಕು.ಕೇವಲ ಇಂಜಕ್ಷನ್,ಮಾತ್ರೆ ನೀಡುವವರು ವೈದ್ಯರಾಗಲು ಸಾಧ್ಯವಿಲ್ಲ.ರೋಗಿಯ ಮನಸ್ಥಿತಿಯನ್ನು ಅರ್ಥಮಾಡಿಕೊಂಡು ಚಿಕಿತ್ಸೆ ನೀಡುವವನೇ ನಿಜವಾದ ವೈದ್ಯ.ಸಂಶೋಧನೆಯ ಕಡೆಗೂ ಹೆಚ್ಚಿನ ಗಮನಹರಿಸಬೇಕೆಂದು ಎಂದು ಕಿವಿ ಮಾತು ಹೇಳಿದರು.
ಸಿದ್ದಗಂಗಾ ಮಡಿಕಲ್ ಕಾಲೇಜಿನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಡಾ.ಸಚ್ಚಿದಾನಂದ ಮಾನತಾಡಿ,ದೇಶದಲ್ಲಿ ಪ್ರತಿವರ್ಷ ೨೦ ಲಕ್ಷ ಜನ ನೀಟ್ ಪರೀಕ್ಷೆ ಬರೆಯುತ್ತಾರೆ.ಇವರಲ್ಲಿ ಶೇ೫೦ರಷ್ಟು ಅಂದರೆ ೧೦ ಲಕ್ಷ ಜನ ತೇರ್ಗಡೆ ಹೊಂದಿದರೆ, ಅವರಲ್ಲಿ ೧.೦೬ಲಕ್ಷ ಜನರಿಗೆ ಮಾತ್ರ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ದೊರೆಯುತ್ತದೆ.ಹಾಗಾಗಿ ಇಲ್ಲಿ ಬಂದಿರುವ ನೀವೆಲ್ಲರೂ ಬುದ್ದಿವಂತರೇ ಆಗಿದ್ದೀರಿ.ಎಂ.ಬಿ.ಬಿ.ಎಸ್ ಶಿಕ್ಷಣ ಪಡೆದರೆ ವೈದ್ಯ ವೃತ್ತಿಯ ಜೊತೆಗೆ,ಹಲವಾರು ಅವಕಾಶಗಳಿವೆ, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಐಎಎಸ್, ಕೆ.ಎಸ್.ಎಸ್,ಐಎಂಎಸ್,ವೈದ್ಯಕೀಯ ಶಿಕ್ಷಣದ ಉಪನ್ಯಾಸಕರಾಗಿ,ಉದ್ಯಮಿಗಳು ಆಗಲು, ವೈದ್ಯಕೀಯ ಪರಿಕರ ಉತ್ಪಾದಿಸುವ ಕಂಪನಿಗಳಲ್ಲಿ ಸಿಇಓ ನಂತರ ಹುದ್ದೆಗಳಿಗೆ ಸೇರಲು ಅವಕಾಶವಿದೆ.ಆಯ್ಕೆ ನಿಮ್ಮದು,ನಿಮ್ಮ ಕನಸಿಗೆ ರೆಕ್ಕೆಗೆ ಮತ್ತಷ್ಟು ಶಕ್ತಿ ತುಂಬುವ ಕೆಲಸವನ್ನು ಸಿದ್ದಗಂಗ ಸಂಸ್ಥೆ ಮಾಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.