ಉತ್ತಮ ನಾಯಕರು ಉತ್ತಮ ಸಮಾಜದ ನಿರ್ಮಾತೃಗಳು , ನಗರದ ಪ್ರತಿಷ್ಠತಿ ಶಾಲೆಗಳಲ್ಲಿ ಒಂದಾಗಿರುವ ಊರುಕೆರೆಯ ಜೈನ್ ಪಬ್ಲಿಕ್ ಶಾಲೆಯಲ್ಲಿ ಈ ವರ್ಷದ ಶಾಲಾ ಚುನಾವಣೆಯಲ್ಲಿ ಆಯ್ಕೆಯಾದ ಮಕ್ಕಳಿಗೆ ಪದಗ್ರಹಣ ಸಮಾರಂಭವನ್ನು ಎರ್ಪಡಿಸಲಾಗಿತ್ತು. ಈ ಸಮಾರಂಭದಲ್ಲಿ ಆಗಮಿಸಿದ್ದ ಮಹೇಶ್ರವರು ತಮ್ಮ ಜೀವನದ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಶಿಸ್ತು, ಕರ್ತವ್ಯ ಎಷ್ಟು ಮುಖ್ಯವಾಗಿದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟರು. ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸುನಿತಾ ದುಗ್ಗಲ್ರವರು ವಹಿಸಿ ಮಾತನಾಡುತ್ತಾ ನಾಯಕರುಗಳಾಗಿ ಆಯ್ಕೆಯಾದ ವಿದ್ಯಾರ್ಥಿಗಳು ಯಾವ ರೀತಿ ಉತ್ತಮ ನಾಯಕತ್ವ ಗುಣಗಳನ್ನು ಅಳವಡಿಸಿಕೊಂಡು ಕೆಲಸಗಳನ್ನು ನಿರ್ವಹಿಸಬೇಕೆಂದು ಸಲಹೆಗಳನ್ನು ನೀಡಿದರು. ಈ ಸಮಾರಂಭದಲ್ಲಿ ಶಾಲಾ ನಿರ್ವಾಹಕ ಅಧಿಕಾರಿಗಳಾದ ಬಸವರಾಜ್, ಶಾಲಾ ಸಂಯೋಜಕರಾದ ಚನ್ನಬಸವಯ್ಯ, ಶ್ರೀಮತಿ ಪೂರ್ಣಿಮ, ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.