ಗುಬ್ಬಿ ವಿಧಾನಸಭಾ ಕ್ಷೇತ್ರ: ನಿಷೇಧಾಜ್ಞೆ ಜಾರಿ
ತುಮಕೂರು(ಕ.ವಾ.)ಏ.೧೧: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬAಧಿಸಿದAತೆ ಏಪ್ರಿಲ್ ೧೩ ರಿಂದ ೨೦ರವರೆಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಈ ಅವಧಿಯಲ್ಲಿ ಜನಸಂದಣಿ ಹೆಚ್ಚಾಗುವುದರಿಂದ ಸಾರ್ವಜನಿಕರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ೧೩೫-ಗುಬ್ಬಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯ ಸುತ್ತಮುತ್ತ ೧೦೦ ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶದಲ್ಲಿ ನಿಷೇಧಾಜ್ಞೆ ಹೊರಡಿಸಿ ಗುಬ್ಬಿ ತಾಲ್ಲೂಕು ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿ ಆರತಿ ಬಿ. ಅವರು ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆಯು ಏಪ್ರಿಲ್ ೧೩ ರಿಂದ ೨೦ರವರೆಗೆ ಬೆಳಿಗ್ಗೆ ೧೦ ರಿಂದ ಸಂಜೆ ೪ ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನಿಷೇಧಾಜ್ಞೆ ಜಾರಿ ಅವಧಿಯಲ್ಲಿ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸುವ ಅಭ್ಯರ್ಥಿ ಮತ್ತು ಅವರೊಂದಿಗೆ ೪ ಮಂದಿಗೆ ಮಾತ್ರ ೧೩೫-ಗುಬ್ಬಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯನ್ನು ಪ್ರವೇಶಿಸಲು ಅನುಮತಿ ಇರುತ್ತದೆ. ಈ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ. ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.
ಗುಬ್ಬಿ ವಿಧಾನಸಭಾ ಕ್ಷೇತ್ರ: ನಿಷೇಧಾಜ್ಞೆ ಜಾರಿ

Leave a comment
Leave a comment