ತುಮಕೂರು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ಬಿ.ಸಿ ಟ್ರಸ್ಟ್ ತುಮಕೂರು ತಾಲ್ಲೋಕು ಇವರ ಆರ್ಥಿಕ ಸಹಕಾರದೊಂದಿಗೆ ಹೆತ್ತೇನಹಳ್ಳಿ ಗ್ರಾಮ ಪಂಚಾಯಿತಿ ಮತ್ತು ಕಂಭತ್ತನಹಳ್ಳಿ ಕೆರೆ ಅಭಿವೃದ್ಧಿ ಸಮಿತಿ ಇವರ ಸಹಭಾಗಿತ್ವದಲ್ಲಿ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಪುನಶ್ಚೇತನ ಗೊಳಿಸಲಾದ ಕಂಭತ್ತನಹಳ್ಳಿ ಕೆರೆಯ ನಾಮಫಲಕ ಅನಾವರಣ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು ಸದರಿ ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವಕುಮಾರ್ ರವರು ಕೆರೆಯ ನಾಮಫಲಕವನ್ನು ಅನಾವರಣಗೊಳಿಸಿ ಮಾತನಾಡುತಾ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ಕೆರೆಗಳ ಸಂರಕ್ಷಣೆ ಬಗ್ಗೆ ಜಾಗೃತಿ ಮನೋಭಾವವನ್ನು ಮೂಡಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ತುಮಕೂರು ತಾಲ್ಲೋಕಿನ ಮಾನ್ಯ ಯೋಜನಾಧಿಕಾರಿಗಳಾದ ಶ್ರೀಮತಿ ಸುನಿತಾಪ್ರಭು ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಪ್ರತಿಯೊಂದು ಗ್ರಾಮದಲ್ಲಿಯೂ ಒಂದು ಕೆರೆ ಇರಬೇಕು,ಗ್ರಾಮಕ್ಕೊಂದು ಉತ್ತಮ ಕೆರೆ ಅಭಿವೃದ್ಧಿ ಹೊಂದಿದರೆ ಆ ಗ್ರಾಮದ ರೈತರಿಗೆ ಜನ ಜಾನವಾರುಗಳಿಗೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ಹೇಳಿದರು,ನಮ್ಮೂರು ನಮ್ಮ ಕೆರೆ ಹಾಗೂ ಕೆರೆ ಅಭಿವೃದ್ಧಿ ಸಮಿತಿಯವರ ಜವಾಬ್ದಾರಿಗಳ ಕುರಿತು ಮಾತನಾಡಿದರು.
ಹೆತ್ತೇನಹಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಓಬಳಯ್ಯ ರವರು ಯೋಜನಾ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಗಿರೀಶ್ ರವರು ಕೆರೆ ಕಾಮಗಾರಿ ಮತ್ತು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಮತ್ತು ಡಾ||ಡಿ.ವಿರೇಂದ್ರ ಹೆಗ್ಗಡೆರವರ ದೂರದೃಷ್ಠಿತ್ವವನ್ನು ಅಭಿನಂದಿಸಿದರು.