ಹೆಲೆನ್ ಕೆಲ್ಲರ್ ಜಯಂತಿ ಃ ಅಂಗವಿಕಲರಿಗಾಗಿ ಜುಲೈ ೨೧ ರಂದು ಅರಿವು ಕಾರ್ಯಕ್ರಮತುಮಕೂರು, ಜು.೧೯: ಹೆಲ್ಲನ್ ಕೆಲ್ಲರ್ ಜಯಂತಿ ಅಂಗವಾಗಿ ಪರಿವರ್ತನ ಚಾರಿಟಬಲ್ ಟ್ರಸ್ಟ್, ಪರಿವರ್ತನ ಜಾಗೃತಿ ಕಲಾತಂಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಗಾಜಿನಮನೆಯಲ್ಲಿ ಜುಲೈ ೨೧ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಅಂಗವಿಕಲರು ಮತ್ತು ಪೋಷಕರಿಗಾಗಿ ಜಿಲ್ಲಾ ಮಟ್ಟದ ಸ್ವ-ಭರವಸೆಯ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿವರ್ತನ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷೆ ಟಿ.ಎಸ್. ಮಂಜುಳ ತಿಳಿಸಿದರು.ನಗರದ ಪತ್ರಿಕಾ ಭವನದಲ್ಲಿಂದು ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಅನುಭವಿಗಳ ಮೂಲಕ ಹಲವಾರು ಸರ್ಕಾರಿ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಳಕೆಯಲ್ಲಿ ವಿಕಲಚೇತನರು ಮತ್ತು ಪೋಷಕರ ಪಾತ್ರ, ಕೌಶಲ್ಯ ಸಾಮರ್ಥ್ಯ ಹಾಗೂ ಸಾಮಾಜಿಕ ಭಾವಗಹಿಸುವಿಕೆಯಲ್ಲಿ ವಿಕಲಚೇತನತರಿಗೆ ಎದುರಾಗುವ ಸವಾಲುಗಳು ಹಾಗೂ ಪರಿಹಾರಗಳ ಕುರಿತು ಮಾಹಿತಿ ನೀಡಲಾಗುವುದು. ಆರ್ಥಿಕ ಅಭಿವೃದ್ಧಿಯಲ್ಲಿ ವಿಕಲಚೇತನರು ಮತ್ತು ಪೋಷಕರ ಪಾತ್ರ ಕುರಿತು ಚರ್ಚಿಸಲಾಗುವುದೆಂದರು.ಹಿರೇಮಠದ ಶ್ರೀ ಶ್ರೀ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಲಿದ್ದು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಡಾ|| ರಮೇಶ್ ಅಧ್ಯಕ್ಷತೆವಹಿಸಲಿದ್ದಾರೆ. ಜಿಲ್ಲೆಯ ವಿವಿಧ ಶಾಸಕರಾದ ಜ್ಯೋತಿಗಣೇಶ್, ಸುರೇಶ್ಗೌಡ, ಎಸ್.ಆರ್. ಶ್ರೀನಿವಾಸ್, ಸುರೇಶ್ಬಾಬು, ಮಾಜಿ ಶಾಸಕ ರಫೀಕ್ ಅಹ್ಮದ್, ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಗಟ್ಟ ತಾಲೂಕು ಶಾಸಕ ರವಿಕುಮಾರ್, ಮೇಯರ್ ಪ್ರಭಾವತಿ ಎಂ., ಉಪ ಮೇಯರ್ ಟಿ.ಕೆ. ನರಸಿಂಹಮೂರ್ತಿ, ಪಾಲಿಕೆ ಸದಸ್ಯರು, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚೀನಿ. ಪುರುಷೋತ್ತಮ್ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಕಾರ್ಯಕ್ರಮದ ಪ್ರಯುಕ್ತ ಅಂದು ಬೆಳಿಗ್ಗೆ ೯.೩೦ ಗಂಟೆಗೆ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ಅಂಗವಿಕಲರು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನಗಳನ್ನು ಪಡೆಯಬೇಕೆಂದು ಅವರು ಮನವಿ ಮಾಡಿದರು.ಈ ಸಂದರ್ಭದಲ್ಲಿ ಟ್ರಸ್ಟಿನ ಖಜಾಂಚಿ ಬಿ. ರವೀಂದ್ರ, ಕಾರ್ಯದರ್ಶಿ ನಂಜಾಚಾರಿ, ಸದಸ್ಯರಾದ ನಾಗವೇಣಿ, ಶಿವಾನಂದ ಸೇರಿದಂತೆ ಮತ್ತಿತರರಿದ್ದರು.