ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕು ಇಡಕನಹಳ್ಳಿ ಗ್ರಾಮದ ಸಮೀಪ ನಡೆಯುತ್ತಿರುವ ೯೭ ಕಿ.ಮೀ. ಹೇಮಾವತಿ ನಾಲೆ ದುರಸ್ಥಿ ಕಾಮಗಾರಿ ಸ್ಥಳಕ್ಕೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿ.ಪಂ.ಸಿಇ ಡಾ. ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಮಹಾನಗರ ಪಾಲಿಕೆ ಆಯುಕ್ತ ಹೆಚ್.ವಿ. ದರ್ಶನ್, ಉಪವಿಭಾಗಾಧಿಕಾರಿ ಹೋಟೆಲ್ ಶಿವಪ್ಪ, ಹೇಮಾವತಿ ಮುಖ್ಯ ಇಂಜಿನಿಯರ್ ವರದಯ್ಯ ಮತ್ತಿತರರು ಸಾತ್ ನೀಡಿದರು