ತುಮಕೂರು ಮಹಾನಗರ ಪಾಲಿಕೆಯಲ್ಲಿ ಕಚೇರಿಯ ವ್ಯವಸ್ಥಾಪಕರಾಗಿ ಮತ್ತು ಮೇಯರ್ರವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಿದ ರೇವಣ್ಣನವರು ಶುಕ್ರವಾರದಂದು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಪಾಲಿಕೆ ಸಿಬ್ಬಂದಿ ವರ್ಗದವರು ಅವರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿ ಅಭಿನಂದಿಸಿದರು.
ಬುಗುಡನಹಳ್ಳಿ ಕೆರೆಗೆ ಹೇಮಾವತಿ ನೀರು ಬಂದ ಹಿನ್ನೆಲೆಯಲ್ಲಿ ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಮೇಯರ್ ಪ್ರಭಾವತಿ ಸುಧೀಶ್ವರ್, ಉಪ ಮೇಯರ್ ಟಿ.ಕೆ.ನರಸಿಂಹಮೂರ್ತಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ವೀಣಾ ಮನೋಹರಗೌಡ, ಎ.ಶ್ರೀನಿವಾಸ್, ವಿರೋಧ ಪಕ್ಷದ ನಾಯಕ ವಿಷ್ಣುವರ್ಧನ್, ಸದಸ್ಯರುಗಳು ಅಧಿಕಾರಿಗಳೊಂದಿಗೆ ಕರೆ ವೀಕ್ಷಿಸಿದರು.