ಸಭೆಯಲ್ಲಿನ ಮಾತುಕತೆಗಳು:
ವಿದೇಶಿ ಅಧ್ಯಯನ ಕಾರ್ಯಕ್ರಮದ ಮೂಲಕ ಯುನೈಟೆಡ್ ಸ್ಟೇಟ್ಸ್ನಲ್ಲಿ ಸಾಹೇ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶೈಕ್ಷಣಿಕ ಅನುಭವವನ್ನು ನೀಡುವುದು. ಅದೇ ರೀತಿ ಅಮೇರಿಕಾದ ವಿದ್ಯಾರ್ಥಿಗಳಿಗೆ ಶ್ರೀ ಸಿದ್ಧಾರ್ಥ ವಿಶ್ವವಿದ್ಯಾಲಯದ ಕ್ಯಾಂಪಸ್ಗಳಲ್ಲಿ ಅಧ್ಯಯನಕ್ಕೆ ಅವಕಾಶ ಕಲ್ಪಿಸಿ, ಪರಸ್ಪರ ಎರಡು ವಿವಿಗಳ ಪರಿಧಿಯನ್ನು ವಿಸ್ತರಿಸುವುದಲ್ಲದೆ, ವಿಭಿನ್ನ ಪರಿಸರ-ಸಾಂಸ್ಕೃತಿಕ ತಿಳುವಳಿಕೆಯನ್ನು ಬೆಳೆಸುವುದಕ್ಕೆ ಒತ್ತು ನೀಡಲು ಸಭೆಯಲ್ಲಿ ತಿರ್ಮಾನಿಸಲಾಯಿತು.
ಶ್ರೀ ಸಿದ್ಧಾರ್ಥ ವಿಶ್ವವಿದ್ಯಾನಿಲಯದಲ್ಲಿ ಅಂತರರಾಷ್ಟಿçÃಯ ಕೇಂದ್ರವನ್ನು ಸ್ಥಾಪಿಸುವ ಅಗತ್ಯವನ್ನು ಸಹ ಒತ್ತಿ ಹೇಳಲಾಯಿತು. ಈ ಕೇಂದ್ರವು ಅಂತರಾಷ್ಟಿçÃಯ ವಿನಿಮಯ ಕಾರ್ಯಕ್ರಮಗಳಿಗೆ ಪ್ರಧಾನ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಇಲ್ಲಿನ ವೈವಿಧ್ಯತೆಯನ್ನು ಪೋಷಿಸುವುದಕ್ಕೆ ಮತ್ತು ಸೌಲಭ್ಯಗಳನ್ನು ಒದಗಿಸುವ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸಂವಾದಗಳ ವೇದಿಕೆಯಾಗಲಿದೆ ಎಂಬ ಅಂಶವನ್ನು ಸಭೆಯಲ್ಲಿ ವಿವರಿಸಲಾಯಿತು. ಇಂಗ್ಲೀಷ್ ಭಾಷಾ ಪ್ರಾವೀಣ್ಯತೆಯ ಮಹತ್ವವನ್ನು ಗುರುತಿಸಿ, ಈ ಬಗ್ಗೆ ಚರ್ಚೆಸುವ ಕುರಿತು ಗಮನ ಹರಿಸಲಾಯಿತು. ಎಲ್ಲಾ ವಿದ್ಯಾರ್ಥಿಗಳ ಭಾಷಾ ಕೌಶಲ್ಯವನ್ನು ಹೆಚ್ಚಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.