“ಜಿಲ್ಲೆಯ ೫೦ ಅಮೃತ ಸರೋವರಗಳ ಅಂಗಳದಲ್ಲಿ ತ್ರಿವರ್ಣ ಧ್ವಜಾ ರೋಹಣ”
“ನನ್ನ ಮಣ್ಣು ನನ್ನ ದೇಶ ಅಭಿಯಾನ”
ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಆಗಸ್ಟ್ ೧೫ರ ಸ್ವಾತಂತ್ರ ದಿನಾಚರಣೆಯ ಸಂದರ್ಭದಲ್ಲಿ ಜಿಲ್ಲೆಯ ೫೦ ಅಮೃತ ಸರೋವರಗಳ ಅಂಗಳದಲ್ಲಿ ತ್ರಿವರ್ಣ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಎಂಬುದಾಗಿ ತುಮಕೂರು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರಿ ಪ್ರಭು ಜಿ. ರವರು ತಿಳಿಸಿದ್ದಾರೆ.
ಭಾರತಕ್ಕೆ ಸ್ವಾತಂತ್ರ ಲಭಿಸಿ ೭೫ ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಕಳೆದ ವರ್ಷ ಕೇಂದ್ರ ಸರ್ಕಾರವು “ಅಜಾದಿಕಾ ಅಮೃತ ಮಹೋತ್ಸವ” ಅಂಗವಾಗಿ ಪ್ರತಿಯೊಂದು ಜಿಲ್ಲೆಗಳಲ್ಲಿಯೂ ಕನಿಷ್ಠ ೭೫ ಅಮೃತ ಸರೋವರಗಳನ್ನು ಹೊಸದಾಗಿ ಸೃಜನೆ ಮಾಡಲು ಸಂಕಲ್ಪ ಮಾಡಿ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಅಮೃತ ಸರೋವರಗಳ ನಿರ್ಮಾಣವನ್ನು ಕೈಗೊಳ್ಳಲಾಗಿದೆ.
Gold buyers near me Bengaluru global Gold Company