ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್ಗೆ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು.
ನಗರದ ಟ್ರಾಫಿಕ್ ಜಂಕ್ಷನ್ಗಳಲ್ಲಿ ಅಳವಡಿಸಲಾದ ಎಐ ಆಧರಿತ ಸಿಸಿ ಕ್ಯಾಮೆರಗಳ ಕಾರ್ಯನಿರ್ವಹಣೆ, ಸಂಚಾರ ನಿಯಮ ಉಲ್ಲಂಘಿಸುತ್ತಿರುವ ಸವಾರರಿಗೆ ದಂಡ ವಿಧಿಸುವ ಪ್ರಕ್ರಿಯೆ, ಪಾರ್ಕಿಂಗ್ ಸಮಸ್ಯೆ ಕುರಿತು ಮಾಹಿತಿ ಪಡೆದರು. ಟ್ರಾಫಿಕ್ ಸುಧಾರಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.
ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಂಚಾರ ವಿಭಾಗದ ಜಂಟಿ ಆಯುಕ್ತ ಎಂ.ಎನ್.ಅನುಚೇತ್, ಡಿಸಿಪಿ ಕುಲದೀಪ್ ಕುಮಾರ್ ಜೈನ್ ಮತ್ತಿತರ ಅಧಿಕಾರಿಗಳು ಇದ್ದರು.