ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣಗಳು ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದ್ದವು.
ಬಂದ್ ಹಿನ್ನೆಲೆಯಲ್ಲಿ ತುರ್ತು ಸೇವೆಗಳಾದ ಸರ್ಕಾರಿ ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್ಗಳು, ಹಾಲಿನ ಮಳಿಗೆಗಳು, ತರಕಾರಿ ಅಂಗಡಿಗಳು ಎಂದಿನAತೆ ತೆರೆದಿದ್ದವು. ಉಳಿದಂತೆ ಇತರೆ ಅಂಗಡಿಗಳು ಬಂದ್ ಆಗಿದ್ದರೆ ಪೆಟ್ರೋಲ್ ಬಂಕ್ಗಳು ಮಾತ್ರ ಕಾರ್ಯನಿರ್ವಹಿಸಿದವು.
ಕರ್ನಾಟ ಬಂದ್ಗೆ ಹೋಟೆಲ್ ಮಾಲೀಕರು, ಚಿತ್ರಮಂದಿರ ಮಾಲೀಕರು, ಕಾರ್ಮಿಕರು, ಎಪಿಎಂಸಿ ಹಮಾಲಿಗಳು ಸಹ ಬೆಂಬಲ ವ್ಯಕ್ತಪಡಿಸಿದ್ದಾರೆ.

ಅಣಕು ಶವಯಾತ್ರೆ
ನಗರದ ಟೌನ್ಹಾಲ್ ವೃತ್ತದಲ್ಲಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅಣಕು ಶವಯಾತ್ರೆ ನಡೆಸಿದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಚಟ್ಟಕಟ್ಟಿ, ಚಪ್ಪಲಿಯಿಂದ ಹೊಡೆದು ಬಾಯಿ ಬಡಿದುಕೊಂಡು ಆಕ್ರೋಶ ಹೊರ ಹಾಕಿ, ಅಣಕು ಶವಕ್ಕೆ ಅಗ್ನಿಸ್ಪರ್ಶ ಮಾಡಿದರು.
ಶಾಲಾ-ಕಾಲೇಜುಗಳಗೆ ರಜೆ ಇಲ್ಲ
ತುಮಕೂರು ಜಿಲ್ಲೆಯಲ್ಲಿ ಬಂದ್ ಪ್ರಯುಕ್ತ ಯಾವುದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ. ಆದರೆ ಕೆಲ ಶಾಸಗಿ ಶಾಲೆಗಳು ಮುನ್ನೆಚ್ಚರಿಕೆ ಕ್ರಮವಾಗಿ ಆನ್ಲೈನ್ ತರಗತಿಗಳನ್ನು ನಡೆಸಿದರೆ, ಸರ್ಕಾರಿ ಶಾಲಾ-ಕಾಲೇಜುಗಳು ಎಂದಿನAತೆ ಕಾರ್ಯನಿರ್ವಹಿಸಿದವು.
ಕನ್ನಡ ಪರ ಒಕ್ಕೂಟದ ಗೌರವಾಧ್ಯಕ್ಷ ಧನಿಯಾಕುಮಾರ್ ಮಾತನಾಡಿ, ಕಾವೇರಿ ನೀರಿನ ಜತೆಗೆ ಹೇಮಾವತಿ ನೀರು ಸಹ ತಮಿಳುನಾಡಿಗೆ ಹರಿದು ಹೋಗುತ್ತಿದೆ. ಇದು ಖಂಡನೀಯ. ರಾಜ್ಯದ ೨೮ ಜನ ಸಂಸದರು ಸೀರೆ ಉಟ್ಟು ಬಳೆ ಹಾಕಿಕೊಂಡು ಮನೆಯಲ್ಲಿ ಇರುವುದು ಒಳಿತು. ಈ ಹೋರಾಟದಲ್ಲಿ ಯಾವೊಬ್ಬ ಸಂಸದರು ಭಾಗವಹಿಸಿಲ್ಲ ಎಂದು ಆಕ್ರೋಶ ಹೊರ ಹಾಕಿದರು.
ಮುಂದಿನ ದಿನಗಳಲ್ಲಿ ಇವರುಗಳು ಸಂಸದರಾಗಲು ನಾಲಾಯಕ್ ಎಂದ ಅವರು, ಕೂಡಲೇ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಕನ್ನಡ ಪರ ಒಕ್ಕೂಟದ ಅಧ್ಯಕ್ಷ ಶಂಕರ್ ಮಾತನಾಡಿ, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದು ಸರಿಯಲ್ಲ. ಇದನ್ನು ವಿರೋಧಿಸಿ ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಂಪೂರ್ಣ ಮಾಡಲಾಗಿದೆ. ಸರ್ಕಾರ ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗ ಮಾತನಾಡಿ, ನಮ್ಮ ನೀರು ನಮ್ಮ ಹಕ್ಕು ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕದ ಜನ ಸ್ವಾಭಿಮಾನ ಮೆರೆಯಬೇಕು. ತಮಿಳುನಾಡಿನ ಜನರನ್ನು ನೋಡಿ ನಾವು ಕಲಿಯಬೇಕು. ಕರ್ನಾಟಕದಲ್ಲಿ ಒಗ್ಗಟ್ಟಿನ ಕೊರತೆಯಿದೆ ಎಂದರು.
ಕೇAದ್ರ ಮತ್ತು ರಾಜ್ಯ ಸರ್ಕಾರಗಳು ಸಾರ್ವಜನಿಕರ ಹಕ್ಕುಗಳನ್ನು ಮರೆಯುತ್ತಿವೆ. ಹೇಮಾವತಿ ತುಮಕೂರು ಜಿಲ್ಲೆಯ ಕುಡಿಯುವ ನೀರಿನ ಬೆನ್ನೆಲುಬಾಗಿದೆ. ಕಾವೇರಿ ನೀರನ್ನು ತಮಿಳುನಾಡು ಪ್ರಾಧಿಕಾರ, ನ್ಯಾಯಾಲಯಗಳ ಮುಖೇನ ತಮ್ಮ ಹಕ್ಕನ್ನು ಕಾಪಾಡಿಕೊಳ್ಳುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಿ ಕಾನೂನು ಮೂಲಕವೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಹಾಗೂ ಅಡಿಷನಲ್ ಎಸ್ಪಿ ಮರಿಯಪ್ಪ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು.
ಪ್ರತಿಭಟನೆಯಲ್ಲಿ ಎಲೆರಾಂಪುರದ ಶ್ರೀ ಹನುಮಂತನಾಥ ಸ್ವಾಮೀಜಿ, ಶ್ರೀ ಬಸವಲಿಂಗ ಸ್ವಾಮೀಜಿ, ಬೆಳ್ಳಾವಿಯ ಕಾರದ ಮಠ ಸ್ವಾಮೀಜಿ, ಶಂಕರ್, ರಂಜು,5 ಸೋಮಶೇಖರ್, ರಂಗಸ್ವಾಮಿ, ಅರುಣ, ಅನಿಲ, ಬಾಬು, ನಟರಾಜು, ಬಸವರಾಜು, ನಟರಾಜುಗೌಡ, ಕಿಶೋರ್ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು, ರೈತ ಸಂಘಟನೆಗಳು ಪದಾಧಿಕಾರಿಗಳು ಭಾಗವಹಿಸಿದ್ದರು.
ಮುಖ್ಯರಸ್ತೆ, ಬಿ.ಹೆಚ್. ರಸ್ತೆ, ಗುಬ್ಬಿ ಗೇಟ್ಗಳಲ್ಲಿ ಎಲ್ಲ ಅಂಗಡಿ ಮುಂಗಟ್ಟುಗಳು, ಹೋಟೆಲ್ಗಳು, ಬೀದಿಬದಿ ಅಂಗಡಿಗಳು, ಬೀದಿ ಬದಿ ಹೋಟೆಲ್ಗಳು ಸ್ವಯಂ ಪ್ರೇರಿತವಾಗಿ ತಮ್ಮ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿದ್ದವು.
ನಗರಗ ಹೊರವಲಯದಲ್ಲಿ ಸಣ್ಣ ಪುಟ್ಟ ಅಂಗಡಿಗಳು, ಹೋಟೆಲ್ಗಳು ಬೆಳಿಗ್ಗೆ ೧೧ ಗಂಟೆಯ ವರೆಗೆ ಬಾಗಿಲು ತೆರೆದಿದ್ದವಾದರೂ ೧೧ ಗಂಟೆ ನಂತರ ತಮ್ಮ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಬಂದ್ ಮಾಡಲಾಗಿತ್ತು.
ನಗರದ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಗಳು ಸಂಚರಿಸಲು ಸಿದ್ದವಾಗಿದ್ದವಾದರೂ ಪ್ರಯಾಣಿಕರ ಸಂಖ್ಯೆ ಮಾತ್ರ ವಿರಳವಾಗಿತ್ತು. ಆದರೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು, ಶಾಲಾ-ಕಾಲೇಜುಗಳು ರಜೆ ಇಲ್ಲದೇ ಇರುವುದರಿಂದ ನೌಕರರು, ಶಿಕ್ಷಕರು, ವಿದ್ಯಾರ್ಥಿಗಳು ಮಾತ್ರ ಬಸ್ಗಳಲ್ಲಿ ಸಂಚರಿಸುತ್ತಿದ್ದ ದೃಶ್ಯ ಕಂಡು ಬಂತು.
ಬೆಳಿಗ್ಗೆ ೯ ಗಂಟೆಯವರೆಗೆ ಅಲ್ಲೊಂದು ಇಲ್ಲೊಂದು ಎಂಬAತೆ ಆಟೋ ರಿಕ್ಷಾಗಳು ರಸ್ತೆಗಿಳಿದಿದ್ದವು. ಆದರೆ ೯ ಗಂಟೆ ನಂತರ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆಯ ಕಾವು ಏರುತ್ತಿದ್ದಂತೆ ಯಾವುದೇ ರೀತಿಯ ಆಟೋ ರಿಕ್ಷಾಗಳ ಸಂಚಾರವು ಕಂಡು ಬರಲಿಲ್ಲ.