ನಾನು ಕೂಡ ಬಿಜೆಪಿ ಟಿಕೇಟ್ ಆಕಾಂಕ್ಷಿ.ಆದರೆ ಟಿಕೇಟ್ಗಾಗಿ ಸುಬ್ರಮಣ್ಯಸ್ವಾಮಿಯ ಹಾಗೆ ದೇಶ ಸುತ್ತಲ್ಲ.ಗಣಪತಿಯ ಹಾಗೆಯೇ ಕೆಲಸ ಮಾಡುತ್ತೇನೆ.ಜಿಲ್ಲೆಯ ಇತಿಹಾಸದಲ್ಲಿಯೇ ಹೊರಗಿನವರು ಬಂದು ಗೆಲುವು ಸಾಧಿಸಿದ ಉದಾಹರಣೆ ಇಲ್ಲ. ಕೊದಂಡರಾಮಯ್ಯ, ಎ.ಕೃಷ್ಣಪ್ಪ, ದೇವೇಗೌಡರೇ ನಮಗೆ ಸಾಕ್ಷಿ.ಗೆಲ್ಲಬೇಕೆಂಬ ಕಾರಣಕ್ಕೆ ಹೊರಗಿನವರಿಗೆ ಟಿಕೇಟ್ ನೀಡಿದರೆ ಸ್ಥಳೀಯ ನಾಯಕತ್ವ ಬೆಳೆಯುವುದು ಹೇಗೆ ?, ರಾಜಕೀಯ ದೃವಿಕರಣ ಎಂಬುದು 1969ರಲ್ಲೆ ಇಂದಿರಾ ಕಾಂಗ್ರೆಸ್, ರಾಷ್ಟ್ರೀಯ ಕಾಂಗ್ರೆಸ್ ಆರಂಭವಾದ ದಿನದಿಂದಲೇ ಆರಂಭಗೊoಡಿದೆ ಚುನಾವಣೆ ಸಂದರ್ಭದಲ್ಲಿ ಅಲ್ಲಿಯವರು ಇಲ್ಲಿಗೆ, ಇಲ್ಲಿಯವರು ಅಲ್ಲಿಗೆ ಹೋಗುವುದು ಸಹಜ.ಕೆಲವೊಮ್ಮೆ ನಾವು ನಂಬಿದ್ದ ಸಿದ್ದಾಂತಗಳಿಗೆ ರಾಜೀ ಅನಿವಾರ್ಯ.ಹಾಗೆಂದ ಮಾತ್ರಕ್ಕೆ ಸ್ವಾಭಿಮಾನ ಬಿಟ್ಟು ರಾಜಕಾರಣ ಮಾಡಲ್ಲ.ಅನಿವಾರ್ಯವಾದರೆ ಬಿಟ್ಟು ಮನೆಯಲ್ಲಿಯೇ ಇರುತ್ತದೆ ಎಂದು ಎಂದು ಜೆ.ಸಿ.ಮಾಧುಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.