ತುಮಕೂರು, ಮಾ.16- ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನ ನನ್ನ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸವನ್ನು ಮಾಜಿ ಸಂಸದ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಅವರು ಇಂದಿಲ್ಲಿ ವ್ಯಕ್ತಪಡಿಸಿದರು.
ನಾನು ಈ ಹಿಂದಿನ ಅವಧಿಯಲ್ಲಿ ಸಂಸದನಾಗಿದ್ದಾಗ 5 ವರ್ಷಗಳ ಕಾಲ ಕ್ಷೇತ್ರದ ಜನರ ಸಂಪರ್ಕದಲ್ಲಿದ್ದೆ. ನನ್ನ ಶಕ್ತಿ ಮೀರಿ ಅಭಿವೃದ್ಧಿ ಕೆಲಸಗಳನ್ನು ಮಾಡಿ ದ್ದೇನೆ. ಹಾಗಾಗಿ ಕ್ಷೇತ್ರದ ಜನತೆ ನನ್ನ ಮೇಲೆ ಪ್ರೀತಿ, ವಿಶ್ವಾಸ ಇಟ್ಟಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಖಂಡಿತ ಕ್ಷೇತ್ರದ ಮತದಾರರು ನನ್ನ ಕೈ ಹಿಡಿಯಲಿದ್ದಾರೆ ಎಂದರು.
ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಹಿರಿಯ ಶ್ರೀಗಳಾದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಮಾತನಾಡಿದ ಅವರು, 100ಕ್ಕೂ 101 ಭಾಗದಷ್ಟು ನನ್ನ ಮೇಲೆ ಜನತೆ ಪ್ರೀತಿ ವಿಶ್ವಾಸ ಇಟ್ಟಿದ್ದಾರೆ. ಹಾಗೆಯೇ ಪಕ್ಷದ ಹಿರಿಯ ಮುಖಂಡರು, ಕಾರ್ಯ ಕರ್ತರು ಎಲ್ಲರೂ ಸಹ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಹಾಗಾಗಿ ಈ ಬಾರಿ ಎಲ್ಲರೂ ನನ್ನ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸ ತಮಗಿದೆ ಎಂದರು.
ನಿನ್ನೆ ಬೆಂಗಳೂರಿನಲ್ಲಿ ಆದಿಚುಂಚನ ಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀ ರ್ವಾದ ಪಡೆದಿದ್ದೆ. ಇಂದು ಸಿದ್ದಗಂಗಾ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ಕ್ಷೇತ್ರ ವ್ಯಾಪ್ತಿಯಲ್ಲಿರುವ ಮಠಗಳು, ದೇವಾಲಯ ಗಳಿಗೂ ತೆರಳಿ ಆಶೀರ್ವಾದ ಪಡೆದು ಪ್ರಚಾರ ಕಾರ್ಯ ಆರಂಭಿಸುವುದಾಗಿ ಅವರು ಹೇಳಿದರು.
ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ಮಾತನಾಡಿ, ನಮ್ಮ ಪಕ್ಷದ ಅಭ್ಯರ್ಥಿಯಾಗಿರುವ ಎಸ್.ಪಿ. ಮುದ್ದ ಹನುಮೇಗೌಡರನ್ನು ಗೆಲ್ಲಿಸಿಕೊಳ್ಳಲು ಜಿಲ್ಲೆಯ ಎಲ್ಲ ಮುಖಂಡರುಗಳು, ಸಚಿವರಾದ ಡಾ. ಜಿ. ಪರಮೇಶ್ವರ್, ಕೆ.ಎನ್.ರಾಜಣ್ಣನವರು, ಟಿ.ಬಿ. ಜಯಚಂದ್ರ, ಕೆ. ಷಡಕ್ಷರಿರವರ ನೇತೃತ್ವದಲ್ಲಿ ನಾವೆಲ್ಲರೂ ಶ್ರಮ ವಹಿಸಿ ಕೆಲಸ ಮಾಡುತ್ತೇವೆ ಎಂದರು.
ನನ್ನ ಶಕ್ತಿ ಮೀರಿ ಅಭಿವೃದ್ಧಿ ಕೆಲಸಗಳನ್ನು ಮಾಡಿ ದ್ದೇನೆ.
Leave a comment
Leave a comment