ನಿಗಧಿಪಡಿಸುತ್ತಿದ್ದರು. ನಿರೀಕ್ಷಿತ ಗುರಿ ಸಾಧಿಸದ ಅಧಿಕಾರಿಗಳಿಂದ ಕೆಲಸ ತೆಗೆಯುವ ಕಲೆ ಅವರಲ್ಲಿದೆ. ಜಿಲ್ಲಾಧಿಕಾರಿಗಳೊಂದಿಗೆ ಕೆಲಸ ನಿರ್ವಹಿಸಿದ ದಿನಗಳು ಅವಿಸ್ಮರಣೀಯವೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರೊಬೇಷನರಿ ತಹಶೀಲ್ದಾರ್ ನಾಗಮಣಿ ಮಾತನಾಡಿ ನ್ಯಾಯಾಲಯ ಪ್ರಕರಣಗಳನ್ನು ಇತ್ಯರ್ಥಪಡಿಸುವಾಗ ಅನುಸರಿಸಬೇಕಾದ ನಿಯಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಕಲಿಯುವ ಅವಕಾಶ ದೊರೆತ ಕ್ಷಣಗಳ ಬಗ್ಗೆ ಮೆಲುಕು ಹಾಕಿದರು.
ಮಹಾನಗರ ಪಾಲಿಕೆ ಆಯುಕ್ತ ಹೆಚ್.ವಿ. ದರ್ಶನ್ ಮಾತನಾಡಿ ಯಾವುದೇ ಸಭೆಯಿದ್ದರೂ ನಿಗಧಿತ ಸಮಯಕ್ಕೆ ಸರಿಯಾಗಿ ನಡೆಸುತ್ತಿದ್ದ ಜಿಲ್ಲಾಧಿಕಾರಿಗಳ ಸಮಯಪಾಲನೆಯನ್ನು ನಾವೆಲ್ಲರೂ ರೂಢಿಸಿಕೊಳ್ಳುವ ಅಗತ್ಯವಿದೆ. ಸಭೆಯಲ್ಲಿ ಯಾವ ಅಧಿಕಾರಿಯನ್ನು ದೂರುತ್ತಿರಲಿಲ್ಲ. ಬದಲಿಗೆ ಮಾರ್ಗದರ್ಶನ ನೀಡುತ್ತಿದ್ದರು. ಅವರ ತಾಳ್ಮೆಗೆ ಅವರೇ ಸಾಟಿ ಎಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಗುಬ್ಬಿ ತಹಶೀಲ್ದಾರ್ ಆರತಿ ಮಾತನಾಡಿ ಸರ್ಕಾರಿ ಕೆಲಸವನ್ನು ದೇವರ ಕೆಲಸವೆಂದು ಭಾವಿಸಿರುವ ಅವರದು ವಿರಳ ವ್ಯಕ್ತಿತ್ವ. ಮನಸ್ಸು ನಿಷ್ಕಲ್ಮಶವಾಗಿದ್ದರೆ ಮಾತು ಮಲಿನವಾಗಿರುವುದಿಲ್ಲವೆಂದು ಸದಾ ಅಧಿಕಾರಿಗಳಿಗೆ ಮನನ ಮಾಡುತ್ತಿದ್ದರು. ನನ್ನ ವೃತ್ತಿ ಜೀವನದಲ್ಲಿ ಕಂಡ ಅತ್ಯುತ್ತಮ ಜಿಲ್ಲಾಧಿಕಾರಿಗಳು ಇವರು ಎಂದು ಬಣ್ಣಿಸಿದರು.
ನಗರಾಭಿವೃದ್ಧಿ ಕೋಶದ ಅಂಜನಪ್ಪ ಮಾತನಾಡಿದ ನಗು-ನಗುತ್ತಲೇ ನಮ್ಮಿಂದ ಕೆಲಸ ತೆಗೆದುಕೊಂಡಿದ್ದಾರೆ. ನಗರ ಸ್ಥಳೀಯ ಸಂಸ್ಥೆಯಲ್ಲಿ ಯಾವುದೇ ಸಮಸ್ಯೆ ಎದುರಾದರೂ ಬೆನ್ನೆಲುಬಾಗಿ ನಿಲ್ಲುವುದಲ್ಲದೆ ಪೌರಕಾರ್ಮಿಕರ ನೇರ ನೇಮಕಾತಿಗೆ ಸಂಬAಧಿಸಿದAತೆ ಅಧಿಸೂಚನೆ ಹೊರಡಿಸಲು ಕ್ರಮ ಕೈಗೊಂಡರು. ಬಡವರಿಗೆ ಅನುಕೂಲ ಮಾಡಿಕೊಡಲು ಆದ್ಯತೆ ನೀಡಬೇಕೆಂದು ಮಾರ್ಗದರ್ಶನ ನೀಡಿದ್ದಾರೆ ಎಂದು ತಿಳಿಸಿದರು.
ಚುನಾವಣಾ ತರಬೇತಿದಾರ ಡಾ|| ಜಿ.ವಿ. ಗೋಪಾಲ ಮಾತನಾಡಿ ಜಿಲ್ಲಾ ಚುನಾವಣಾಧಿಕಾರಿಗಳಾಗಿದ್ದರೂ ಸಹ ಚುನಾವಣಾ ಸಂದರ್ಭದಲ್ಲಿ ಅಧಿಕಾರಿ/ಸಿಬ್ಬಂದಿಗಳಿಗಾಗಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯಂತೆ ಕುಳಿತು ಆಲಿಸುವ ದೊಡ್ಡ ಗುಣವನ್ನು ಅವರಲ್ಲಿ ಕಂಡಿದ್ದೇನೆ. ತರಬೇತಿಯನ್ನು ಸುಲಭವಾಗಿ ನೀಡುವ ವಿಧಾನವನ್ನು ಅವರಿಂದ ಪಡೆದಿದ್ದೇನೆ ಎಂದು ತಮ್ಮ ಅನುಭವದ ಮಾತುಗಳನ್ನು ಹಂಚಿಕೊAಡರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ರವಿ ಮಾತನಾಡುತ್ತಾ ಜಿಲ್ಲಾಧಿಕಾರಿಗಳ ಕ್ಷಮಾ ಗುಣ, ತಾಯಿ ಹೃದಯ, ಕೆಲಸದಲ್ಲಿ ಶಿಸ್ತು, ಅಧಿಕಾರದೊಂದಿಗೆ ಮಾನವೀಯ ಹಿನ್ನೆಲೆಯುಳ್ಳ ಗುಣಗಳು ನನ್ನ ಮನ ಸೆಳೆದಿವೆ. ನಮ್ಮದೇ ಇಲಾಖೆಗೆ ಆಯುಕ್ತರಾಗಿ ಬಂದಿರುವುದು ನನಗೆ ಸಂತಸ ತಂದಿದೆ. ಇನ್ನಷ್ಟು ಕಾಲ ಅವರ ಅಧೀನದಲ್ಲಿ ಸೇವೆ ಮಾಡುವ ಅವಕಾಶ ನನಗಿದೆ ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯ ವಿದ್ಯಾರ್ಥಿಗಳು ಧ್ಯಾನ ಮಂತ್ರದ ಮೂಲಕ ಜಿಲ್ಲಾಧಿಕಾರಿಗಳನ್ನು ಬೀಳ್ಕೊಟ್ಟಿದ್ದು ಹಾಗೂ ಜಿಲ್ಲಾಧಿಕಾರಿಗಳ ಬಗ್ಗೆ ಸತೀಶ್ ಅವರ ಕವನ ವಾಚನ ವಿಶೇಷವಾಗಿತ್ತು.
ನಂತರ ನಿಕಟಪೂರ್ವ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹಾಗೂ ರಶ್ಮಿ ಪಾಟೀಲ ದಂಪತಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳಾದ ರಿಷಿ ಆನಂದ್ ಹಾಗೂ ಕಲ್ಪಶ್ರೀ, ತಹಶೀಲ್ದಾರ್ ಸಿದ್ದೇಶ್, ಕುಣಿಗಲ್ ತಹಶೀಲ್ದಾರ್ ಮಹಾಬಲೇಶ್ವರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ನಿರ್ಮಿತಿ ಕೇಂದ್ರದ ರಾಜಶೇಖರ್, ರೇಷ್ಮೆ ಇಲಾಖೆ ಉಪನಿರ್ದೇಶಕ ವೈ.ಎ. ಬಾಲಕೃಷ್ಣ, ಎಲ್ಲ ತಾಲೂಕು ತಹಶೀಲ್ದಾರರು, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಸುಜಯ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಮಂಜುನಾಥ, ಜಿಲ್ಲಾ ಶಸ್ತçಚಿಕಿತ್ಸಕಿ ಡಾ|| ವೀಣಾ, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ. ನಂಜಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಗಂಗಪ್ಪ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಅತೀಕ್, ಸಣ್ಣ ಮಸಿಯಪ್ಪ, ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ದೊಡ್ಮನೆ ಗೋಪಾಲಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ನಿರೂಪಿಸಿದರು. ಉಪವಿಭಾಗಾಧಿಕಾರಿ ಹೋಟೆಲ್ ಶಿವಪ್ಪ ವಂದನಾರ್ಪಣೆ ಸಲ್ಲಿಸಿದರು
ಜಿಲ್ಲೆ ತೋರಿದ ಪ್ರೀತಿಯನ್ನು ನಾನೆಂದೂ ಮರೆಯುವುದಿಲ್ಲ ವೈ.ಎಸ್.ಪಾಟೀಲ
Leave a comment
Leave a comment