ಎಸ್ಪಿ
ತುಮಕೂರು, ಸೆ. ೧೩- ನಗರ ಡಿವೈಎಸ್ಪಿ ಶ್ರೀನಿವಾಸ್ ಮೇಲೆ ದೂರು ಬಂದಿದೆ ನಿಜ, ಪರಿಶೀಲಿಸಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಹೇಳಿದರು. ಪೊಲೀಸರು ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು. ನಿಯಮ ಮೀರಿದ್ದರೆ, ಕಾನೂನು ಉಲ್ಲಂಘಿಸಿರುವುದು ಕಂಡು ಬಂದರೆ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲಾಗುವುದು. ಜಮೀನು ವಿವಾದ ಸೇರಿದಂತೆ ಸಿವಿಲ್ ಪ್ರಕರಣಗಳಲ್ಲಿ ಪೊಲೀಸರು ಭಾಗಿಯಾಗಿದ್ದು ಗಮನಕ್ಕೆ ಬಂದರೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲೆಯ ೪೨ ಪೊಲೀಸ್ ಠಾಣೆಗಳಲ್ಲಿ ೨,೨೦೦ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಅವುಗಳ ವಿಲೇವಾರಿಗೆ ಗಮನ ಹರಿಸಲಾಗುವುದು. ಅಪರಾಧ, ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದು, ಜಿಲ್ಲೆಯನ್ನು ಸಮಗ್ರವಾಗಿ ಅಧ್ಯಯನ ಮಾಡಿದ ನಂತರ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುವುದು. ಹಿಂದೆ ಏನಾಗಿತ್ತು ಎಂಬುದಕ್ಕಿAತ ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಚಿಂತಿಸಲಾಗುವುದು. ಜನರು ಸಹಕಾರ ನೀಡಿದರೆ ಕಾನೂನು, ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗಲಿದೆ ಎಂದರು. ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಕಾರ್ಯ ಯೋಜನೆ ರೂಪಿಸಲಾಗುವುದು. ವ್ಹೀಲಿಂಗ್ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು. ಪತ್ರಿಕಾಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿ. ಮರಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.
ಕಾನೂನು ಮೀರಿದರೆ ಪೊಲೀಸರ ವಿರುದ್ಧವೂ ಕ್ರಮ
Leave a comment
Leave a comment