ಜಿಲ್ಲಾಧಿಕಾರಿಗಳ ಕಚೇರಿಯ ಮೊದಲನೇ ಮಹಡಿಯ ಜಿಲ್ಲಾ ನೋಂದಣಾಧಿಕಾರಿಗಳ ಕಚೇರಿಯ ಪಕ್ಕದಲ್ಲಿ ನೂತನವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯನ್ನು ಮಾನ್ಯ ಗೃಹ ಸಚಿವರಾದ ಡಾ: ಜಿ. ಪರಮೇಶ್ವರ್ ಅವರು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಶಾಸಕ ಸುರೇಶ್ ಗೌಡ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಹಾಜರಿದ್ದರು.