ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ಹೊರ ಹೋಗಿಗಳ ವಿಸ್ತರಣಾ ಘಟಕ ಮತ್ತು ಆಸ್ಪತ್ರೆಯ ಸಿಬ್ಬಂದಿಗಾಗಿ ನೂತನವಾಗಿ ನಿರ್ಮಿಸಲಾಗಿರುವ ಬಹುಮಹಡಿ ಕಟ್ಟಡಗಳನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ ಬಹಳ ಅತ್ಯಂತ ಸ್ವಚ್ಛವಾಗಿರುವ ಉತ್ತಮ ಸಂಸ್ಥೆ. ನೂತನವಾಗಿ ನಿರ್ಮಾಣ ಮಾಡಲಾಗಿರುವ ಸೂಪರ್ ಸ್ಪೆಷಾಲಿಟಿ ಹೊರ ರೋಗಿಗಳ ಘಟಕದಿಂದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ. ನೆಪ್ರೋಲಜಿ. ಗ್ಯಾಸ್ಟೊçÃಎಂಟರಾಲಜಿ ಸೇರಿದಂತೆ ವಿವಿಧ ರೋಗಗಳಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸಲಾಗಿದೆ ಎಂದರು.
ಕಡಿಮೆ ದರದಲ್ಲಿ ಜನಸಾಮಾನ್ಯರಿಗೆ ಚಿಕಿತ್ಸೆ ನೀಡುತ್ತಿರುವ ಪರಂಪರೆ, ಇತಿಹಾಸ ಸಿದ್ದಾರ್ಥ ಸಂಸ್ಥೆಯದ್ದಾಗಿದೆ. ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಸೇರಿದಂತೆ ಇಡೀ ಸಿದ್ದಾರ್ಥ ಆಸ್ಪತ್ರೆಯ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಅತ್ಯಾಧುನಿಕ ತಂತ್ರಜ್ಞಾನದ ಹೊರ ಹೋಗಿಗಳ ವಿಸ್ತರಣಾ ಘಟಕ , ಆಸ್ಪತ್ರೆಯ ಸಿಬ್ಬಂದಿಗಾಗಿ ಬಹುಮಹಡಿ ಕಟ್ಟಡ ಉದ್ಘಾಟನೆ
Leave a comment
Leave a comment