ಕರ್ನಾಟಕ ಸರ್ಕಾರದ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಜಿ ರವರು ಇಂದು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತುಮಕೂರು ಕುಡಿಯುವ ನೀರಿಗೆ ಸಂಬಂಧಿಸಿದಂತೆ ಕಾವೇರಿ ನೀರಾವರಿ ನಿಗಮ(ನಿ) ದ ಹೇಮಾವತಿ ನಾಲಾ ವಲಯದವರೊಂದಿಗೆ ಸಭೆ ನಡೆಸಿದರು. ಬಳಿಕ ನಿಟ್ಟೂರು ಬಳಿಯ ಇಡಕನಹಳ್ಳಿ ಕಾಲುವೆ ಕಾಮಗಾರಿ, ಬುಗುಡನಹಳ್ಳಿ ಕೆರೆಯ ಸ್ಥಳ ಪರಿಶೀಲನೆಯನ್ನು ನಡೆಸಿದರು.. ತುಮಕೂರು ನಗರಕ್ಕೆ ಕುಡಿಯುವ ನೀರಿನ ವ್ಯತ್ಯಯ ಆಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನವನ್ನು ನೀಡಿದರು.. ಸಭೆಯಲ್ಲಿ ಶಾಸಕರಾದ ಜ್ಯೋತಿ ಗಣೇಶ, ಜಿಲ್ಲಾಧಿಕಾರಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಆಯುಕ್ತರು, ತುಮಕೂರು ಮಹಾನಗರ ಪಾಲಿಕೆ, ಮುಖ್ಯ ಇಂಜನೀಯರ್, ಹೇಮಾವತಿ ನಾಲಾ ವಲಯ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.