ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಗ್ಗೆ.
ತುಮಕೂರು : ತುಮಕೂರು ನಗರ ಸೇರಿದಂತೆ ಜಿಲ್ಲೆಯ ಇತರೆ ನಗರ ಮತ್ತು ಪಟ್ಟಣಗಳಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಬೇಕೆಂದು ಮತ್ತು ಇಂಗ್ಲಿಷ್ ಸೇರಿದಂತೆ ಇತರ ಭಾಷೆಯ ನಾಮಫಲಕಗಳನ್ನು ತೆರವುಗೊಳಿಸಬೇಕೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿ ಜಿಲ್ಲಾ ಅಧ್ಯಕ್ಷರಾದ ಯಲ್ಲೇಶ್ ಗೌಡ ರವರು ಮಾತನಾಡಿ ತುಮಕೂರು ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕನ್ನಡ ನಾಮಫಲಕಗಳನ್ನು ಕಡ್ಡಾಯಗೊಳಿಸಬೇಕು ಈ ಬಗ್ಗೆ ಜಿಲ್ಲಾಡಳಿತ ಅಸಡ್ಡೆ ತೋರದೆ ಕೂಡಲೇ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಜಿಲ್ಲಾಧ್ಯಕ್ಷರು ಅಗ್ರಹಾರ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿರುತ್ತಾರೆ.
ಜಿಲ್ಲಾ ಉಪಾಧ್ಯಕ್ಷ ಹೇಮಂತ್ ಕುಮಾರ್ ವಿದ್ಯಾರ್ಥಿ ಘಟಕದ ಅಧ್ಯಕ್ಷ ದಿಲೀಪ್ ಕುಮಾರ್ ಸುಧಾಕರ್ ಗೌಡ ಅಂಜನ್ ಮೂರ್ತಿ ಗಿರೀಶ್ ಜಿಎಂರವರುಗಳು ಭಾಗವಹಿಸಿದ್ದರು.
ಕನ್ನಡ ನಾಮಫಲಕಗಳನ್ನು ಅಳವಡಿಸುವುದನ್ನು ಕಡ್ಡಾಯ
Leave a comment
Leave a comment