ತುಮಕೂರು- ಸ್ಮಾರ್ಟ್ಸಿಟಿ ಯೋಜನೆಯಡಿ ನವೀಕೃತಗೊಂಡಿರುವ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದ ನಿರ್ವಹಣೆಯ ಹೊಣೆಯನ್ನು ವಹಿಸಿಕೊಳ್ಳುವಂತೆ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಇಂದಿಲ್ಲಿ ತಿಳಿಸಿದರು.
ಸ್ಮಾರ್ಟ್ಸಿಟಿ ಯೋಜನೆಯಡಿ ಕೋಟ್ಯಂತರ ರೂ. ವೆಚ್ಚದಲ್ಲಿ ನವೀಕೃತಗೊಂಡಿರುವ ನಗರದ ಮಹಾತ್ಮಗಾಂಧಿ ಕ್ರೀಡಾಂಗಣ ನಿರ್ವಹಣೆ ಇಲ್ಲದೆ ಸೊರಗುವ ಹಂತಕ್ಕೆ ತಲುಪಿತ್ತು. ಕ್ರೀಡಾಂಗಣದ ನಿರ್ವಹಣೆಯ ಜವಾಬ್ದಾರಿ ಹೊರಲು ಯಾವ ಇಲಾಖೆಯು ಮುಂದೆ ಬರದ ಕಾರಣ ಕ್ರೀಡಾಪಟುಗಳು, ಕ್ರೀಡಾ ತರಬೇತುದಾರರು ಕ್ರೀಡಾಂಗಣ ಸಮರ್ಪಕ ನಿರ್ವಹಣೆಗೆ ಜಿಲ್ಲಾಡಳಿತ ಸೇರಿದಂತೆ ಶಾಸಕರು, ಸಚಿವರುಗಳನ್ನು ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮಹಾತ್ಮಗಾಂಧಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು, ಕ್ರೀಡಾಂಗಣ ಹಾಗೂ ಜಿಮ್ ಕೇಂದ್ರ ನಿರ್ವಹಣೆ ಕುರಿತಂತೆ ಸೈಟ್ ಮ್ಯಾನೇಜರ್ ಗುರು ಅವರಿಂದ ಮಾಹಿತಿ ಪಡೆದು, ಶೀಘ್ರವೇ ಮಹಾತ್ಮಗಾಂಧಿ ಕ್ರೀಡಾಂಗಣವನ್ನು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸುಪರ್ದಿಗೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದರು.
ಕ್ರೀಡಾAಗಣದಲ್ಲಿ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಅಗತ್ಯ ಸೌಲಭ್ಯ ಕಲ್ಪಿಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಲೋಹಿತ್ ಗಂಗಾಧರಯ್ಯ, ಸೈಟ್ ಮ್ಯಾನೇಜರ್ ಗುರು ಮತ್ತಿತರರು ಉಪಸ್ಥಿತರಿದ್ದರು.
ಮಹಾತ್ಮಗಾಂಧಿ ಕ್ರೀಡಾಂಗಣದ ನಿರ್ವಹಣೆಯ ಹೊಣೆಯನ್ನು ವಹಿಸಿಕೊಳ್ಳುವಂತೆ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಗೆ ಸೂಚನೆ
Leave a comment
Leave a comment