ತುಮಕೂರು ವಿಶ್ವವಿದ್ಯಾನಿಲಯ ನ.21-22ರಂದು ಕೊರಟಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಅಂತರ ಕಾಲೇಜು ಕ್ರೀಡಾಕೂಟ 2023-24ನೇ ಸಾಲಿನ ಪುರುಷರ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ತಂಡ ಛಾಂಪಿಯನ್ ಆಗಿ ಹೊರಹೊಮ್ಮಿದ್ದು, ತನ್ನ ಹಾಲಿ ಛಾಂಪಿಯನ್ ಪಟ್ಟ ಉಳಿಸಿಕೊಂಡಿದೆ. ನಾಯಕ ತೇಜಸ್ ಎಸ್. ಹಾಗೂ ತಂಡದವರನ್ನು ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ, ದೈಹಿಕ ಶಿಕ್ಷಣ ಹಾಗೂ ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕ ಡಾ. ಸುದೀಪ್ ಕುಮಾರ್ ಆರ್. ಅಭಿನಂದಿಸಿದರು.