ಅಂತರರಾಷ್ಟಿçÃಯ ಯೋಗ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ. ವಿದ್ಯಾಕುಮಾರಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿAದು ೯ನೇ ಅಂತರಾಷ್ಟಿçÃಯ ಯೋಗ ದಿನಾಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜೂನ್ ೨೧ರಂದು ಬೆಳಿಗ್ಗೆ ೬ ರಿಂದ ೮ ಗಂಟೆಯವರೆಗೆ ನಿಗಧಿತ ಸ್ಥಳದಲ್ಲಿ ಕಡ್ಡಾಯವಾಗಿ ಎಲ್ಲಾ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿಗಳು ಹಾಗೂ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಜರಾಗಬೇಕು ಎಂದು ಹೇಳಿದರು.
ಎಲ್ಲಾ ಇಲಾಖೆಗಳಲ್ಲಿ ಒಂದು ದಿನ ಸಮಯವನ್ನು ನಿಗಧಿ ಮಾಡಿ ಸಿಬ್ಬಂದಿಗಳಿಗೆ ೧೦ ರಿಂದ ೧೫ ನಿಮಿಷಗಳ ಕಾಲ ಯೋಗಾಭ್ಯಾಸ ತರಬೇತಿ ಹಾಗೂ ಯೋಗದ ಮಹತ್ವದ ಬಗ್ಗೆ ನುರಿತ ತಜ್ಞರಿಂದ ಉಪನ್ಯಾಸ ನೀಡಲು ಅಗತ್ಯ ಕ್ರಮಕೈಗೊಳ್ಳುವಂತೆ ಆಯುಷ್ ಇಲಾಖೆಯ ಅಧಿಕಾರಿ ಡಾ. ಸಂಜೀವ ಮೂರ್ತಿ ಅವರಿಗೆ ಸೂಚಿಸಿದರು.
ಯೋಗಾ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂನ್ ೨೦ರಂದು ನಗರದ ಜಿಲ್ಲಾ ಆಯುಷ್ ಕಚೇರಿಯಿಂದ ಮಹಾತ್ಮ ಗಾಂಧಿ ಕ್ರೀಡಾಂಗಣದವರೆಗೆ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಡಿಡಿಪಿಐ ನಂಜಯ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆ

Leave a comment
Leave a comment


