ಸಿಇಓ ಜಿ.ಪ್ರಭು
ತುಮಕೂರು(ಕ.ವಾ.)ಆ.೧: ದಿಶಾ ಪರಿಶೀಲನಾ ಸಭೆಗೆ ಅಧಿಕಾರಿಗಳು ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರು ಸೂಚಿಸಿದರು.
ಜಿಲ್ಲಾಪಂಚಾಯತ್ ಸಭಾಂಗಣದಲ್ಲಿAದು ನಡೆದ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಆಗಸ್ಟ್ ೪ರಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ೨೦೨೩-೨೪ನೇ ಸಾಲಿನ ಮೊದಲ ತ್ರೆöÊಮಾಸಿಕ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳು ಹಾಗೂ ನಿಗಮ ಮಂಡಳಿಗಳು ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಿರುವ ಯೋಜನೆಗಳ ಸಮರ್ಪಕ ಮಾಹಿತಿಯೊಂದಿಗೆ ಹಾಜರಾಗಬೇಕೆಂದು ಅವರು ಸೂಚಿಸಿದರು.
ದಿಶಾ ಸಭೆಗೆ ಸಂಪೂರ್ಣ ಮಾಹಿತಿಯೊಂದಿಗೆ ಹಾಜರಾಗಲು ಸೂಚನೆ
Leave a comment
Leave a comment