ತುಮಕೂರು: ವಿದ್ಯಾರ್ಥಿಗಳು ಶೈಕ್ಷಣಿಕ ಅಧ್ಯಯನದ ಜೊತೆಗೆ ಪಠೇತರ ಚಟುವಟಿಕೆಗಳಿಗೆ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಬೆಳಕಿಗೆ ತರಬೇಕೆಂಬ ಉದ್ದೇಶದಿಂದ ನಗರದ ಶ್ರೀ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ ತುಮಕೂರು ವಿಶ್ವವಿದ್ಯಾನಿಲಯ ಮಟ್ಟದ ‘ಗಾನಕಲಾ ಸ್ಪರ್ಧೆ’ ಏರ್ಪಡಿಸಲಾಗಿದೆ.
ನಗರದ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನ ಶಿಕ್ಷಣ ಭೀಷ್ಮ ಡಾ.ಎಚ್.ಎಂ. ಗಂಗಾಧರಯ್ಯ ಸಭಾಂಗಣದಲ್ಲಿ ಇದೇ ಜನವರಿ ೧೧ ನಡೆಯಲಿದ್ದು, ತುಮಕೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಜನಪದ ಗೀತೆ ಭಾವಗೀತೆ ಮತ್ತು ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪದವಿ ಕಾಲೇಜುಗಳ ವಿದ್ಯಾರ್ಥಿ -ವಿದ್ಯಾರ್ಥಿನಿಯರು ಭಾಗವಹಿಸುವಂತೆ ಸಾಂಸ್ಕೃತಿಕ ವಿಭಾಗದ ಸಂಚಾಲಕರು & ಕನ್ನಡ ವಿಭಾಗ ಮುಖ್ಯಸ್ಥರು ಪ್ರೊ. ರಮೇಶ್ ಮಣ್ಣೆ ಮನವಿ ಮಾಡಿದ್ದಾರೆ.
ಈ ಸಂಬAಧ ಕಾಲೆಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸಿದ್ದಾರ್ಥ ಗಾನಕಲಾ-೨೮ರ ಕಾರ್ಯಕ್ರಮದ ಭಿತ್ತಿ ಚಿತ್ರವನ್ನು (ಪತ್ರಿಕೆಯನ್ನು) ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತç ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರು ಪ್ರೊ. ಬಿ ಶೇಖರ್, ಶ್ರೀ ಸಿದ್ದಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಕುಲಾಧಿಪತಿಗಳ ಸಲಹೆಗಾರರಾದ ಪ್ರೊ. ವಿವೇಕ್ ವೀರಯ್ಯ, ಪ್ರಾಂಶುಪಾಲರಾದ ಡಾ.ಹೇಮಲತಾ ಪಿ.ಖಲಂದರ್ ಪಾಷ , ಸೈಯದ್ ಬಾಬು ಉಪಸಿತರಿದ್ದರು.
ಸಿದ್ದಾರ್ಥ ಪದವಿ ಕಾಲೇಜಿನಲ್ಲಿವಿಶ್ವವಿದ್ಯಾನಿಲಯ ಮಟ್ಟದ ‘ಗಾನಕಲಾ ಸ್ಪರ್ಧೆ’ಗೆ ಅಹ್ವಾನ
Leave a comment
Leave a comment