ಶ್ರಮಿಕ, ದುಡಿಯುವ ವರ್ಗಕ್ಕೆ ಕನ್ನಡಪರ ಸಂಘಟನೆಗಳು ವಿವಿಧ ಸೌಲಭ್ಯಗಳನ್ನು ಕಲ್ಪಿಸುತ್ತಿರುವುದು ಶ್ಲಾಘನೀಯ :ಶಾಸಕ ಜ್ಯೋತಿ ಗಣೇಶ್
ತುಮಕೂರು: ನಾಡಿನಲ್ಲಿ ಕನ್ನಡಪರ ಸಂಘಟನೆಗಳು ನಾಡು ನುಡಿ ನೆಲ ಜಲ ಭಾಷೆ ಜೊತೆ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿ ನಾಡಿನ ನಿರ್ಗತಿಕರು ಬಡವರು ಶ್ರಮಿಕ ದುಡಿಯುವ ವರ್ಗಕ್ಕೆ ಆರೋಗ್ಯ ಸೌಲಭ್ಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ತುಮಕೂರು ನಗರ ಶಾಸಕ ಜಿ ಬಿ ಜ್ಯೋತಿ ಗಣೇಶ್ ಅವರು ತಿಳಿಸಿದರು.
ಅಖಿಲ ಕರ್ನಾಟಕ ಕಾರ್ಮಿಕ ಪ್ರಜಾ ವೇದಿಕೆ ಆ ಯೋಜನೆ ಮಾಡಿದ ೨ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಕನ್ನಡಪರ ಸಂಘಟನೆಗಳು ಜನಪರವಾದ ಕಾಳಜಿಗಳನ್ನು ಹೊಂದಿ ಕೇವಲ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಸೀಮಿತವಾಗದೆ ಬಡ ಕಾರ್ಮಿಕರನ್ನು ಗುರುತಿಸಿ ಪ್ರತಿಷ್ಠಿತ ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಸಯೋಗದೊಂದಿಗೆ ಅವರ ಆರೋಗ್ಯ ತಪಾಸಣೆ ನಡೆಸಿ ಸೂಕ್ತವಾದ ಸಲಹೆ ಚಿಕಿತ್ಸೆಗಳನ್ನು ಕೊಡಿಸಿ ಅರ್ಥಪೂರ್ಣವಾಗಿ ರಾಜ್ಯೋತ್ಸವವನ್ನು ಆಚರಣೆ ಮಾಡುತ್ತಿರುವುದು ಶ್ಲಾಘನೀಯವೆಂದು ತಿಳಿಸಿದರು.