ತುಮಕೂರು- ಪ್ರಧಾನಿ ನರೇಂದ್ರ ಮೋದಿಯವರು ನುಡಿದಂತೆ ನಡೆಯಲ್ಲ. ಹಾಗಾಗಿ ನುಡಿದಂತೆ ನಡೆಯುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಕೈ ಬಲಪಡಿಸಲು ಈ ಬಾರಿ ಜೆಡಿಎಸ್ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಹೇಳಿದರು.
ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ. ಸುರೇಶ್ಬಾಬು ಪರ ಮತಯಾಚಿಸಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರಿಗೆ ಶಕ್ತಿ ತುಂಬುತ್ತೇನೆ ಅಂತ ಹೇಳುತ್ತಾರೆ. ಆದರೆ ಅವರು ನುಡಿದಂತೆ ಮೋದಿ ನಡೆಯುವುದಿಲ್ಲ ಎಂದರು.
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕೊಟ್ಟವರು ನಾವು. ಈಗಾಗಲೇ ನಾನು ಲೋಕಸಭೆ, ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಬಿಲ್ ಪಾಸ್ ಮಾಡುವಂತೆ ಪತ್ರ ಬರೆದಿದ್ದೇನೆ. ಯಾವುದೇ ಒಂದು ಸಮಾಜಕ್ಕೆ ದೇವೇಗೌಡರಿಂದ ಅನ್ಯಾಯವಾಗಿಲ್ಲ ಎಂದು ಹೇಳಿದರು.
ಸ್ತಿçÃಶಕ್ತಿ ಸಂಘದ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ಗೆ ಸ್ಪಷ್ಟ ಬಹುಮತ ನೀಡಿ ಅಧಿಕಾರಕ್ಕೆ ತಂದರೆ ಕುಮಾರಸ್ವಾಮಿ ಅವರು ನುಡಿದಂತೆ ನಡೆಯುತ್ತಾರೆ ಎಂದರು.
ದೇಶದಲ್ಲಿ ರೈತರ ಸಾಲ ಮನ್ನಾ ಮಾಡಿದ ಏಕೈಕ ಮುಖ್ಯಮಂತ್ರಿ ಎಂದರೆ ಅದು ಕುಮಾರಸ್ವಾಮಿ ಎಂದ ಅವರು, ರೈತರಿಗೆ ೫ ಸಾವಿರ ಮಾಸಾಶನ ಕೊಡುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆಲ್ಲ ರಾಜ್ಯದ ಜನತೆ ಅವರಿಗೆ ಶಕ್ತಿ ತುಂಬಬೇಕು ಎಂದು ಅವರು ಮನವಿ ಮಾಡಿದರು.
೯೦ನೇ ವಯಸ್ಸಿನಲ್ಲಿ ಏಳೆಂಟು ಸಭೆ ಮಾಡುತ್ತಿದ್ದೇನೆ. ಏತಕ್ಕೆ, ಯಾರಿಗೋಸ್ಕರ ಗೊತ್ತಾ ಎಂದು ಪ್ರಶ್ನಿಸಿದ ಅವರು, ಈ ಇಳಿವಯಸ್ಸಿನಲ್ಲೂ ರಾಜ್ಯದ ಜನರಿಗೋಸ್ಕರ ನನ್ನ ಸೇವೆ ಮುಡುಪಾಗಿಟ್ಟಿದ್ದೇನೆ ಎಂದರು.
ಪ್ರತಿ ಹಳ್ಳಿಗೆ ಶುದ್ಧ ನೀರು ಒದಗಿಸುವ ಗುರಿಯನ್ನು ಜೆಡಿಎಸ್ ಪಕ್ಷ ಹೊಂದಿದೆ. ರಾಷ್ಟçದಲ್ಲಿರುವ ಕುಡಿಯುವ ನೀರಿನ ಸಮಸ್ಯೆ, ನದಿ, ಉಪನದಿಗಳ ಮಾಹಿತಿಯನ್ನು ಕುಮಾರಸ್ವಾಮಿ ಸಂಗ್ರಹ ಮಾಡಿದ್ದಾರೆ ಎಂದ ಅವರು,
ಮುಸ್ಲಿಂರಿಗೆ ಮೀಸಲಾತಿ ಕೊಟ್ಟಿದ್ದು ಯಾರು, ಈದ್ಗಾ ಮೈದಾನ ಸಮಸ್ಯೆ ಬಗೆಹರಿಸಿದ್ದು ಯಾರು ಎಂದು ಅವರು ಪ್ರಶ್ನಿಸಿದರು.
ಬಿಜೆಪಿ ಹೆಸರೆತ್ತಿ ಮಾತನಾಡಲು ನಾನು ಬಯಸಲ್ಲ. ಬಿಜೆಪಿಯವರು ಮೀಸಲಾತಿ ತೆಗೆಯುತ್ತೇವೆ ಅಂತಾರೆ. ಇದಕ್ಕೆ ಕೋರ್ಟ್ ಆತಂಕ ವ್ಯಕ್ತಪಡಿಸಿದೆ. ಕುಮಾರಸ್ವಾಮಿ ಅಧಿಕಾರಕ್ಕೆ ಬಂದ ತಕ್ಷಣ ಮುಸ್ಲಿಂರ ಮೀಸಲಾತಿ ವಾಪಸ್ ಕೊಡ್ತೀವಿ ಎಂದು ಹೇಳಿದ್ದಾರೆ ಎಂದರು.
ಅಪಪ್ರಚಾರಕ್ಕೆ ತಾವು ಮಾರು ಹೋಗಬಾರದು. ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ತಂದವರು ಯಾರು ಎಂಬ ಬಗ್ಗೆ ಸತ್ಯ ಹೇಳಬೇಕು. ಈ ಸಮುದಾಯಕ್ಕೂ ಮೀಸಲಾತಿ ನೀಡಿದ್ದು ನಾನೇ ಎಂದು ಅವರು ಹೇಳಿದರು.
ಸುರೇಶ್ಬಾಬು ಅವರು ತಮ್ಮ ಮನಸಿನ ನೋವನ್ನು ಹೇಳಿಕೊಂಡಿದ್ದಾರೆ. ಯಾವುದೇ ಆಮಿಷಕ್ಕೆ ಒಳಗಾಗದೆ, ದೇವೇಗೌಡರ ಪಕ್ಷದಲ್ಲಿ ಉಳಿಯುತ್ತೇನೆ ಎಂದು ಹೇಳಿದವರು ಸುರೇಶ್ ಬಾಬು. ತನೆಹೊತ್ತ ಮಹಿಳೆಯ ಗುರುತಿಗೆ ಮತ ನೀಡಿ ಅವರನ್ನು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.