ಜಿಲ್ಲೆಯಲ್ಲಿ ಮುಂದಿನ ನಾಲ್ಕೆöÊದು ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆ: ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಲು ಡೀಸಿ ಸೂಚನೆ
ತುಮಕೂರು(ಕ.ವಾ) ಮೇ.೨೪: ಜಿಲ್ಲೆಯಲ್ಲಿ ಮುಂದಿನ ನಾಲ್ಕೆöÊದು ದಿನಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಹಾಜರಿದ್ದು, ಮಳೆಯಿಂದ ಉಂಟಾಗಬಹುದಾದ ತುರ್ತು ಪರಿಸ್ಥಿತಿಯನ್ನು ತ್ವರಿತವಾಗಿ ನಿಭಾಯಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿರುವ ಜಲಕಾಯಗಳ ಸುಸ್ಥಿತಿಯ ಬಗ್ಗೆ ಸ್ಥಳ ಪರಿಶೀಲಿಸಿ ಸೂಕ್ಷö್ಮ ಜಲಕಾಯಗಳ ಬಗ್ಗೆ ವೈಯಕ್ತಿಕ ಗಮನಹರಿಸಿ ಯಾವುದೇ ರೀತಿಯಲ್ಲಿ ಹಾನಿ, ತೊಂದರೆಯುAಟಾಗದAತೆ ಪೂರ್ವ ಸಿದ್ಧತೆಗೆ ಕ್ರಮವಹಿಸಬೇಕು. ಜಿಲ್ಲೆಯಲ್ಲಿ ಕೆರೆಗಳು ಒಂದರಿAದ ಒಂದಕ್ಕೆ ಜೋಡಣೆಯಾಗಿರುವುದರಿಂದ ಮೇಲ್ಭಾಗದ ಕೆರೆಗಳು ಹಾನಿಯಾದಲ್ಲಿ ಕೆಳಭಾಗದ ಕೆರೆಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ರೀತಿಯ ಮಾನದಂಡವನ್ನು ಗಣನೆಗೆ ತೆಗೆದುಕೊಂಡು ಸಮರ್ಪಕವಾದ ಪೂರ್ವ ಸಿದ್ಧತೆ ಕೈಗೊಳ್ಳಬೇಕೆಂದು ಜಲಕಾಯಗಳ ತಾಂತ್ರಿಕ ನಿರ್ವಹಣೆ ಮಾಡುವ ಹೇಮಾವತಿ, ಸಣ್ಣ ನೀರಾವರಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ.
ಮಳೆಯಿಂದ ಸಂಭವಿಸಬಹುದಾದ ರಸ್ತೆ ಮತ್ತು ಸೇತುವೆಗಳ ಹಾನಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಸ್ತುತ ಹಾನಿಯಾಗಿರುವ ರಸ್ತೆ ಮತ್ತು ಸೇತುವೆಗಳನ್ನು ತಕ್ಷಣವೇ ದುರಸ್ತಿಪಡಿಸಿ ಸಾರ್ವಜನಿಕರು ಮತ್ತು ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಕ್ರಮವಹಿಸಬೇಕು. ರಸ್ತೆಯ ಮೇಲೆ ನೀರಿನ ಹರಿವಿನ ಮಟ್ಟ ಹೆಚ್ಚಾದಲ್ಲಿ ಅಥವಾ ಮರವಳಿಗಳು ಬಿದ್ದು ರಸ್ತೆ ಸಂಪರ್ಕ ಕಡಿತವಾದಲ್ಲಿ ತುರ್ತು ತೆರವು ಕಾರ್ಯ ಕೈಗೊಳ್ಳಲು ಅಥವಾ ಸಾರ್ವಜನಿಕರ ಸಂಚಾರಕ್ಕೆ ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಲು ಲೋಕೋಪಯೋಗಿ ಮತ್ತು ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗಕ್ಕೆ ನಿರ್ದೇಶನ ನೀಡಿದ್ದಾರೆ.
ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಹಠಾತ್ ಪ್ರವಾಹ (ಈಟಚಿsh ಈಟooಜ) ಪ್ರದೇಶಗಳನ್ನು ಗುರುತಿಸಿ ನೀರು ನಿಲ್ಲದಂತೆ ಸರಾಗವಾಗಿ ಹರಿದು ಹೋಗುವಂತೆ ಕಾಲುವೆ, ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಹವಾಮಾನ ಮುನ್ಸೂಚನೆಯಂತೆ ಅಧಿಕ ಮಳೆಯಾಗುವ ಸಂಭವವಿದ್ದಲ್ಲಿ ಸದರಿ ಪ್ರದೇಶದ ಜನರಿಗೆ ಮುನ್ನೆಚ್ಚರಿಕೆ ನೀಡಲು ಕ್ರಮವಹಿಸಬೇಕು. ಅಗತ್ಯಗನುಗುಣವಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಿ ತುರ್ತು ಪರಿಸ್ಥಿತಿಯನ್ನು ಸಮರ್ಪಕ ರೀತಿಯಲ್ಲಿ ನಿಭಾಯಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಗರಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ.
ಕಳೆದ ವರ್ಷ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅಧಿಕ ಮಳೆಯಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ ಉಂಟಾದ ಕಾರಣ ಸದರಿ ಪರಿಸ್ಥಿತಿ ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಪಾಲಿಕೆ ಆಯುಕ್ತರಿಗೆ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ದುಸ್ಥಿತಿಯಲ್ಲಿರುವ ಹಾಗೂ ಬೀಳುವ ಹಂತದಲ್ಲಿರುವ ಶಾಲೆ/ಅಂಗನವಾಡಿ ಕೊಠಡಿಗಳಲ್ಲಿ ಮಕ್ಕಳನ್ನು ಕೂರಿಸದೆ ಆಯಾ ಶಾಲಾ ವ್ಯಾಪ್ತಿಯಲ್ಲಿ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳತಕ್ಕದ್ದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳಿಗೆ ನಿರ್ದೇಶನ ನೀಡಿದ್ದಾರೆ.
ಮಳೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಲ್ಲಿ ವಿಳಂಬ ಮಾಡದೆ ೨೪ ಗಂಟೆಯೊಳಗಾಗಿ ವಿದ್ಯುತ್ ಸಂಪರ್ಕ ನೀಡಲು ಕ್ರಮವಹಿಸಬೇಕು. ರಾಜ್ಯದಲ್ಲಿ ಈಗಾಗಲೇ ೩ ಮಂದಿ ವಿದ್ಯುತ್ ಸ್ಪರ್ಶದಿಂದ ಮೃತರಾಗಿದ್ದು, ಈ ಬಗ್ಗೆ ವಿಶೇಷ ಗಮನಹರಿಸಿ ತುರ್ತು ಪರಿಸ್ಥಿತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬೆಸ್ಕಾಂ ಇಲಾಖೆಗೆ ತಾಕೀತು ಮಾಡಿದ್ದಾರೆ.
ಜನ-ಜಾನುವಾರುಗಳ ಪ್ರಾಣ ಹಾನಿ, ಬೆಳೆಹಾನಿ, ಮನೆ ಹಾನಿ ಮತ್ತು ಗೃಹೋಪಯೋಗಿ ವಸ್ತುಗಳ ಹಾನಿಯ ಪ್ರಕರಣಗಳಲ್ಲಿ ಸಂಬAಧಪಟ್ಟ ಇಲಾಖೆಗಳು ಸಮನ್ವಯ ಸಾಧಿಸಿ ಎನ್ಡಿಆರ್ಎಫ್(ರಾಷ್ಟಿçÃಯ ವಿಪತ್ತು ನಿರ್ವಹಣಾ ಪಡೆ) ಮಾರ್ಗಸೂಚಿಯಂತೆ ತುರ್ತಾಗಿ ೨೪ ಗಂಟೆಯೊಳಗೆ ಪರಿಹಾರ ನೀಡಲು ಕ್ರಮವಹಿಸತಕ್ಕದ್ದು ಎಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದ ಆರೋಗ್ಯ/ ಕೃಷಿ/ ತೋಟಗಾರಿಕೆ/ ರೇಷ್ಮೆ/ ಪಶುಪಾಲನೆ/ ಪಂಚಾಯತ್ ರಾಜ್ ಇಲಾಖಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ನಿರ್ದೇಶನ ನೀಡಿದ್ದಾರೆ.
ಮುಂಗಾರು ಹಂಗಾಮಿಗೆ ಅವಶ್ಯಕವಾದ ಬಿತ್ತನೆ ಬೀಜ, ರಸಗೊಬ್ಬರ, ಕ್ರೀಟನಾಶಕ ಇತ್ಯಾದಿಗಳನ್ನು ರೈತರಿಗೆ ಸಕಾಲದಲ್ಲಿ ಸರಿಯಾದ ಪ್ರಮಾಣದಲ್ಲಿ ವಿತರಣೆಯಾಗುವಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪ್ರಸ್ತುತ ಮಳೆಯಿಂದ ಉಂಟಾಗಬಹುದಾದ ಹಾನಿಯನ್ನು ಕಂದಾಯ ಇಲಾಖೆ / ಸಿಬ್ಬಂದಿಗಳೊAದಿಗೆ ಜಂಟಿ ಸಮೀಕ್ಷೆ ಕಾರ್ಯವನ್ನು ತುರ್ತಾಗಿ ಕೈಗೊಂಡು ನಿಗಧಿತ ನಮೂನೆಯಲ್ಲಿ ವರದಿ ಸಲ್ಲಿಸಬೇಕೆಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು/ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಮಳೆಯಿಂದ ಉಂಟಾಗಬಹುದಾದ ತುರ್ತು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗಿ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಸೂಕ್ತ ಸಿದ್ಧತೆಗಳನ್ನು ಕೈಗೊಳ್ಳಬೇಕು. ತಪ್ಪಿದಲ್ಲಿ ಸಂಬAಧಪಟ್ಟ ಅಧಿಕಾರಿಯನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಮಳೆಯಾಗುವ, Tumkur
Leave a comment
Leave a comment